ತುಮಕೂರು: ಜಿಲ್ಲಾಡಳಿತ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್ ಸಿಸಿ ತಂಡವು ಪ್ರಥಮ ಬಹುಮಾನ ಪಡೆದುಕೊಂಡಿದೆ.
ಕ್ಯಾಪ್ಟನ್ ತಿರುಮಲೇಶ್ ಯಾದವ್ ತಂಡವನ್ನು ಮುನ್ನಡೆಸಿದ್ದರು. ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಪ್ರಸನ್ನಕುಮಾರ್, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಹಿರಿಯ ಪ್ರಾಧ್ಯಾಪಕ ಪ್ರೊ. ಪಿ. ಪರಮಶಿವಯ್ಯ, ಎನ್‌ಸಿ.ಸಿ. ಅಧಿಕಾರಿ ವಾಸುದೇವ ತಂಡವನ್ನು ಅಭಿನಂದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4