ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 250 ಅಡಿ ಎತ್ತರದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಸಮುದಾಯದ ಪರವಾಗಿ ಕರ್ನಾಟಕ ಭೀಮ್ ಸೇನೆ (ರಿ) ಸಂಘಟನೆವತಿಯಿಂದ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಲಾಯಿತು.
ಕರ್ನಾಟಕ ಭೀಮ್ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ರಾಮಲಿಂಗಯ್ಯ ರವರ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತೆಲಂಗಾಣ ರಾಜ್ಯದಲ್ಲಿ 125ಅಡಿ ಎತ್ತರದ, ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ 206 ಅಡಿ ಎತ್ತರದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯ ಮಹತ್ವದ ಪಾತ್ರ ವಹಿಸಿದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ 250 ಅಡಿ ಎತ್ತರದ ಪ್ರತಿಮೆಯನ್ನು ಬೆಂಗಳೂರು ಹಾಗೂ ಮೈಸೂರು ಮಧ್ಯೆ ನಿರ್ಮಾಣ ಮಾಡಬೇಕೆಂದು ಮನವಿ ಮಾಡಲಾಯಿತು.
ಈ ಹಿಂದೆ ಇದ್ದಂತಹ ಸರ್ಕಾರದ ದುರಾಡಳಿತದಿಂದ ಬೇಸತ್ತು, ಎಲ್ಲ ಹಿಂದುಳಿದ ಸಮುದಾಯ ಒಂದಾಗಿ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಮಹತ್ವದ ಪಾತ್ರ ವಹಿಸಿದ್ದೇವೆ. ಆದುದರಿಂದ ಈ ನಮ್ಮ ಮನವಿಗೆ ಸ್ಪಂದಿಸಿ, ರಾಜ್ಯದಲ್ಲಿ 250 ಅಡಿ ಎತ್ತರದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಮನವಿ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx