ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಆ ಸಮಾಧಿಯನ್ನು ಮರುಸ್ಥಾಪಿಸಬೇಕು ಮತ್ತು ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ವಾಪಸ್ಸು ಪಡೆಯಬೇಕು ಎಂದು ಡಾ.ವಿಷ್ಣುಸೇನಾ ಸಮತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರಿಗೆ ಮನವಿ ಮಾಡಿದ್ದಾರೆ.
ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ನೆಲಸಮಗೊಳಿಸಲಾಗಿರುವ ವಿಷ್ಣು ಸಮಾಧಿಯನ್ನು ಮರು ಸ್ಥಾಪಿಸುವಂತೆ ಮನವಿ ಮಾಡಿಕೊಂಡರು.
ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಡುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಈ ಮೂಲಕ ಅಭಿಮಾನ್ ಸ್ಟುಡಿಯೋ ಜಾಗ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC