ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ನ್ನು ಲಾಂಚ್ ಮಾಡಲಾಗಿದೆ.
ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಮಹಿಳಾ ಉದ್ಯಮಿಗಳು ಮಾಹಿತಿ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ್ದಾರೆ.
ತರಬೇತಿ ಪಡೆದು ಸ್ವ–ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದು ಉತ್ತಮ ಉತ್ಪನ್ನಗಳ ತಯಾರು ಮಾಡುತ್ತಿರುವ ಮಹಿಳಾ ಫಲಾನುಭವಿಗಳು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಜರೂರಾಗಿ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು–572101 ಇಲ್ಲಿ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ನೀಡಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


