ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮೀಸಲಾತಿ ರದ್ದತಿ ವಿಚಾರ ಆಗಾಗ ಚರ್ಚೆಯಾಗುತ್ತಿತ್ತು. ಇದೀಗ ಲೋಕಸಭಾ ಚುನಾವಣೆ ಹೊತ್ತಲ್ಲಿ ಮತ್ತೆ ಆ ವಿಚಾರ ಮುನ್ನಲೆಗೆ ಬಂದಿದ್ದು, ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ, ಅದು ಶಾಶ್ವತವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟೀಕರಣ ನೀಡಿದ್ದಾರೆ.
ಬಿಜೆಪಿ ಎಂದಿಗೂ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ. ನಮಗೆ ಈಗ ಬಹುಮತವಿದ್ದು, ಮೀಸಲಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿಲ್ಲ.ಈಗ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ ಮತ್ತು ತ್ರಿವಳಿ ತಲಾಖ್ ಕೊನೆಗೊಳಿಸಿದ್ದೇವೆ ಆದರೆ ಮೀಸಲಾತಿಯನ್ನು ರದ್ದುಗೊಳಿಸಲಿಲ್ಲ. ಮೀಸಲಾತಿ ಎಂದಿಗೂ ಶಾಶ್ವತವಾದದ್ದು ಅದನ್ನು ಎಂದೂ ತೆಗೆಯಲ್ಲ, ಕಾಂಗ್ರೆಸ್ ಗೂ ತೆಗೆಯಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು 70 ವರ್ಷಗಳಲ್ಲಿ ಕಾಂಗ್ರೆಸ್ 370 ನೇ ವಿಧಿಯನ್ನು ರದ್ದುಗೊಳಿಸಲಿಲ್ಲ. ಆದರೆ ನಾವು ಅದನ್ನು ತೆಗೆದು ಕಾಶ್ಮೀರವನ್ನು ಮುಖ್ಯವಾಹಿನಿಗೆ ತಂದಿದ್ದೇವೆ. ರಾಮಮಂದಿರ ವಿಚಾರವನ್ನು ಕಾಂಗ್ರೆಸ್ ವರ್ಷಗಳ ಕಾಲ ಎಳೆದಾಡುತ್ತಾ ಬಂದಿತ್ತು. ರಾಮಮಂದಿರ ನಿರ್ಮಾಣದ ಭರವಸೆಯನ್ನೂ ಮೋದಿ ಈಡೇರಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಮನೆಗಳಿಗೆ ಅನಿಲ ಸಂಪರ್ಕ, ಬಡವರ ಮನೆಗಳಿಗೆ ಉಚಿತ ವಿದ್ಯುತ್ ಭರವಸೆಯನ್ನು ಬಿಜೆಪಿ ಈಡೇರಿಸಲು ಜನರು ಮೂರನೇ ಅವಧಿಗೆ ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA