nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    ರಾಜ್ಯ ಸುದ್ದಿ February 11, 2026

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    By adminFebruary 11, 2026No Comments2 Mins Read
    ugrappa

    ತುಮಕೂರು: ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲನ್ನು ಶೇ.17ಕ್ಕೆ ಹಾಗೂ ಪ.ಪಂಗಡಗಳಿಗೆ ಇದ್ದ ಶೇ.3ರ ಮೀಸಲು ಪ್ರಮಾಣವನ್ನು ಶೇ.7ಕ್ಕೆ ಏರಿಕೆ ಮಾಡಿ ಮೂರುವರೆ ವರ್ಷಗಳೇ ಕಳೆದಿದ್ದರೂ, ಕೇಂದ್ರ ಸರ್ಕಾರ ಸಂವಿಧಾನದ ಷೆಡ್ಯೂಲ್ ಗೆ ಸೇರಿಸದ ಪರಿಣಾಮ ಈವರೆಗೆ ಜಾರಿಯಾಗಿಲ್ಲ. ಹಾಗಾಗಿ ಸಿಎಂ, ಕೇಂದ್ರ ಸಚಿವರು, ಸಂಸದರು ಈ ವಿಷಯವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಪ್ರಯತ್ನವನ್ನು ಗಂಭೀರವಾಗಿ ಮಾಡಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.

    ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2022ರಲ್ಲಿ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾ. ನಾಗಮೋಹನ್ ದಾಸ್ ಅವರ ವರದಿಯನ್ವಯ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಿ ಆದೇಶ ಮಾಡಿದ್ದರು. ಇದರ ಜಾರಿ ಸಂಬಂಧ 2023ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದು, ಈಗ ಮೀಸಲು ಪ್ರಮಾಣ ಹೆಚ್ಚಳದ ಚೆಂಡು ಕೇಂದ್ರದ ಅಂಗಳದಲ್ಲಿದೆ. ಸಂವಿಧಾನದ ಷೆಡ್ಯೂಲ್ 9ಕ್ಕೆ ಮೀಸಲು ಹೆಚ್ಚಳವನ್ನು ಸೇರಿಸದ ಹೊರತು ಅದರ ಜಾರಿ ಸಾಧ್ಯವಿಲ್ಲ. ಇಂದಿರಾ ಸಹಾನಿ ಪ್ರಕರಣದಲ್ಲಿ ಶೇ.50 ಮೀಸಲು ಮೀರಬಾರದೆಂಬ ನಿಯಮ ಕರ್ನಾಟಕಕ್ಕೆ ಮಾತ್ರ ಏಕೆ? ತಮಿಳುನಾಡಿನಲ್ಲಿ ಈಗಾಗಲೇ ಜನಸಂಖ್ಯೆ ಆಧಾರದಲ್ಲಿ ಶೇ.69ರಷ್ಟು ಮೀಸಲು ಕಲ್ಪಿಸಲಾಗಿದೆ.


    Provided by
    Provided by

    2017ರಲ್ಲಿ ಕೇವಲ 48 ಗಂಟೆಯಲ್ಲೇ ಸಂಸತ್ತಿನಲ್ಲಿ ಚರ್ಚೆ ಮಾಡಿ ಬ್ರಾಹ್ಮಣ ಸೇರಿ ಮೇಲ್ವರ್ಗಗಳಿಗೆ ಶೇ.10ರಷ್ಟು ಇಡಬ್ಲ್ಯುಎಸ್ ಮೀಸಲು ಜಾರಿಗೊಳಿಸಲಾಯಿತು. ಆದರೆ ಪ.ಜಾತಿ, ವರ್ಗ, ಹಿಂದುಳಿದವರ ವಿಷಯದಲ್ಲಿ ಮಾತ್ರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಷೆಡ್ಯೂಲ್ 9ಕ್ಕೆ ಸೇರಿಸುವ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ರಾಜ್ಯದ ಸಚಿವರು, ಶಾಸಕರೇ, ಕೇಂದ್ರದ ಮಂತ್ರಿಗಳು, ಸಂಸದರೇ ನಿಮಗೆ ಕೈ ಮುಗಿಯುತ್ತೇವೆ. ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅಂಬೇಡ್ಕರ್ ಅವರು ಹೇಳಿರುವಂತೆ ಅದು ನಮ್ಮ ಸಾಂವಿಧಾನಿಕ ಹಕ್ಕು. ಹಾಗಾಗಿ ಸದನದ ಹೊರಗೆ ಮತ್ತು ಒಳಗೆ ಈ ಬಗ್ಗೆ ಧ್ವನಿ ಎತ್ತಿ. ಈ ಸಮುದಾಯದ ಮತಗಳಿಂದ ನೀವು ಅಧಿಕಾರದಲ್ಲಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ಉಗ್ರಪ್ಪ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ತುಮಕೂರು: ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲನ್ನು ಶೇ.17ಕ್ಕೆ ಹಾಗೂ ಪ.ಪಂಗಡಗಳಿಗೆ ಇದ್ದ ಶೇ.3ರ ಮೀಸಲು ಪ್ರಮಾಣವನ್ನು…

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.