ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಮುಂಬರುವ ದಿನಗಳಲ್ಲಿಯೂ ಅರ್ಹ ಕ್ರೀಡಾಪಟುಗಳಿಗೆ ಮೀಸಲಾತಿ ಒದಗಿಸಿ, ಕ್ರೀಡಾ ಚಟುವಟಿಕೆಗಳನ್ನು ಮುಂದುವರಿಸಲು ಪ್ರೋತ್ಸಾಹಿಸಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಆಡುಗೋಡಿಯ ನಗರ ಸಶಸ್ತ್ರ ಮೀಡಲು ಪಡೆಯ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದ ಅವರು, ಪಿಎಸ್‌ಐ ಹುದ್ದೆಗಳನ್ನ ಖಾಲಿ ಇಟ್ಟುಕೊಳ್ಳಲು ಆಗಲ್ಲ ಎಂದು ಹೇಳಿದರು.


