ಬೆಂಗಳೂರು: ಪರಿಶಿಷ್ಟ ಜಾತಿ-–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ರೂ.2 ಕೋಟಿ ವೆಚ್ಚದ ಕಾಮಗಾರಿಗಳು, ರೂ.1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್ ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು.
ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ.
ಒಂದು ಕೋಟಿವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವುದು. ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ಕೊಡಲು ನಿರ್ಧಾರ ಮಾಡಲಾಗಿದೆ.
ಎಸ್ಸಿ ಎಸ್ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿವರೆಗಿನ ಮೊತ್ತ ವಿಸ್ತರಿಸಿ 2 ಕೋಟಿವರೆಗೆ ಮೀಸಲಾತಿ ಅವಕಾಶ ಕಲ್ಪಿಸಲಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4