ತುಮಕೂರು: ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ವಸತಿಯುತ ಶಿಕ್ಷಣ ನೀಡುವ ಉದ್ದೇಶದಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ.ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ /ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2025–26ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕಟ್ಟಡ ವ್ಯವಸ್ಥೆಯೊಂದಿಗೆ ನುರಿತ ಶಿಕ್ಷಕರಿಂದ ಶಿಕ್ಷಣ ಸೌಲಭ್ಯ ನೀಡಲಾಗುವುದು. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಥಿಯ STS ನಂಬರ್, ವಿದ್ಯಾರ್ಥಿಯ ಆಧಾರ್ ಕಾರ್ಡ್, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ವಿಶೇಷ ವರ್ಗವಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಲಗತ್ತಿಸಿ ಜನವರಿ 25ರೊಳಗಾಗಿ ಹತ್ತಿರದ ವಸತಿ ಶಾಲೆಗಳಿಗೆ ಸಲ್ಲಿಸಬಹುದಾಗಿದೆ.
ಪ್ರವೇಶಾತಿಗೆ ಫೆಬ್ರವರಿ 15ರಂದು ಪರೀಕ್ಷೆ ನಡೆಯಲಿದ್ದು, ಸಫಾಯಿ ಕರ್ಮಚಾರಿ / ಪೌರಕಾರ್ಮಿಕರ ಮಕ್ಕಳಿಗೆ ಪರೀಕ್ಷೆ ಇಲ್ಲದೆ ನೇರ ದಾಖಲಾತಿ ಮಾಡಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx