ತುಮಕೂರು: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಕಿತ್ತೂರು ರಾಣಿ ಚೆನ್ನಮ್ಮ ವಸತಿ/ಮೊರಾರ್ಜಿ ದೆಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಗೌರವ ಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಗಳಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯದ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ವಿಷಯದ ಶಿಕ್ಷಕರ ಹುದ್ದೆಗೆ ಅಭ್ಯರ್ಥಿಗಳು ಬಿ.ಎ/ಎಂ.ಎ ಮತ್ತು ಬಿ.ಎಡ್/ಟಿಇಟಿ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯದ ಶಿಕ್ಷಕರ ಹುದ್ದೆಗೆ ಬಿಇ/ಬಿಸಿಎ/ಬಿ.ಎಸ್.ಸಿ.(ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವವರು ಶಿಕ್ಷಕ ಹುದ್ದೆಯಲ್ಲಿ ಸೇವಾನುಭವ ಹೊಂದಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 4ರೊಳಗೆ ಸಮೀಪದ ವಸತಿ ಶಾಲೆ ಅಥವಾ ಇ-ಮೇಲ್ principalteacher0408@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 80737536585ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW