ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಪ್ರವೇಶ ಕಲ್ಪಿಸಲಾಗುವ ವಸತಿ ಶಾಲೆಗಳಲ್ಲಿ ಶೇ.75ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಗಳಿಗೆ ಹಾಗೂ ಶೇ25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ.
ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷ ಮೀರಿರಬಾರದು. ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ವಿಳಾಸ Admission for Morarji desai residential schoolನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂರವಾಣಿ ಸಂಖ್ಯೆ: 0816-2273724ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4