ತುಮಕೂರು: ಮಹಿಳೆಯರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ, ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮದೇ ಆದ ರೀತಿಯಲ್ಲಿ ಸಾಧನೆ ಮಾಡುವುದರ ಜೊತೆಗೆ ಸಮಾಜಕ್ಕೆ ಕೊಡುಗೆ ನೀಡಬೇಕು ಯುವಕರಿಗೆ ಕುಟುಂಬಸ್ಥರೊಂದಿಗೆ ಬೇರೆಯುವುದರಿಂದ ಮನೋವಿಕಾಸಗೊಳ್ಳುತ್ತದೆ ಕೆಟ್ಟಆಲೋಚನೆಗಳನ್ನು ದೂರ ಮಾಡುತ್ತದೆ ಎಂದು ನಾಗಮಣಿ ನಾಗಭೂಷಣ್ ಹೇಳಿದರು.
ನಗರದ ಸರಸ್ವತಿಪುರಂನಲ್ಲಿ ಇರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿ ಮಾತನಾಡಿದ ಅವರು, ಕುಟುಂಬದೊಂದಿಗೆ ಬೆರೆತಾಗ ಮಾತ್ರ ಯುವಕರಲ್ಲಿ ಮಹಿಳೆಯರ ಮೇಲೆ ಗೌರವ ಹೆಚ್ಚಾಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತ ಮಾತನಾಡಿ, ಮಹಿಳಾ ದಿನಾಚರಣೆಯನ್ನು ಮಾಡುವಂಥದ್ದು ಪ್ರತಿಯೊಬ್ಬ ಮಹಿಳೆಯರಿಗೂ ಸಹ ಗೌರವ ನೀಡಿದಂತೆ, ಮಹಿಳೆಯರ ಸಾಧನೆ, ಅವರು ಅನುಭವಿಸುತ್ತಿರುವಂತಹ ಸಂಕಷ್ಟಗಳನ್ನ ಚರ್ಚಿಸುವ ವೇದಿಕೆ ಯಾಗಬೇಕು ಮತ್ತು ಸಾಧನೆಯನ್ನ ಶ್ಲಾಘಿಸುವ ವೇದಿಕೆಯಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ರಮೇಶ್ ಮಣ್ಣೆ, ಐ.ಕ್ಯೂ.ಎ.ಸಿ ಸಂಚಾಲಕರಾದ ಸೈಯದ್ ಬಾಬು, ಮಹಿಳಾ ಸಬಲೀಕರಣದ ಸಂಚಾಲಕರು ಹಾಗೂ ಕನ್ನಡ ವಿಭಾಗದ ಉಪನ್ಯಾಸಕರಾದ ಆಶಾ ಎಚ್ ಎಲ್, ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಇತರರು ಇದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4