ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ತಿಳಿಸಿದ್ದಾರೆ.
ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4