ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಆಯುರ್ವೇದ ಮತ್ತು ಹೋಮಿಯೋಪತಿ ಪದವಿ ಕೋರ್ಸ್ಗಳ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಹಾಗೂ ಅಭ್ಯರ್ಥಿಗಳು ದಾಖಲಿಸಿದ ಆಯ್ಕೆಗಳ ಆಧಾರದ ಮೇಲೆ ನಿಯಮಾನುಸಾರ ಸೀಟು ಹಂಚಿಕೆ ಪೂರ್ಣಗೊಂಡಿದ್ದು, ಸೀಟು ಹಂಚಿಕೆಯ ನಂತರದ ಪ್ರಮುಖ ಪ್ರಕ್ರಿಯೆಗಳ ವೇಳಾಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ.
ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ:
* ಆಯ್ಕೆ (Choice) ದಾಖಲಿಸಲು ಅವಕಾಶ: ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ಸೂಕ್ತವಾದ ಆಯ್ಕೆಯನ್ನು (Choice) ದಾಖಲಿಸಲು ಅಕ್ಟೋಬರ್ 18, 2026ರ ಸಂಜೆ 4:00 ಗಂಟೆಯಿಂದ ಅಕ್ಟೋಬರ್ 21, 2026ರ ರಾತ್ರಿ 11:59ರವರೆಗೆ ಕಾಲಾವಕಾಶ ನೀಡಲಾಗಿದೆ.
* ಶುಲ್ಕ ಪಾವತಿ ಮತ್ತು ಕನ್ಫರ್ಮೇಷನ್ ಸ್ಲಿಪ್: ‘Choice 1’ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಶುಲ್ಕ ಪಾವತಿಸಿ ‘ಸೀಟ್ ಕನ್ಫರ್ಮೇಷನ್ ಸ್ಲಿಪ್’ ಡೌನ್ಲೋಡ್ ಮಾಡಿಕೊಳ್ಳಲು ಅಕ್ಟೋಬರ್ 19, 2026ರಿಂದ ಅಕ್ಟೋಬರ್ 22, 2026ರ ಬ್ಯಾಂಕ್ ಕೆಲಸದ ದಿನಗಳು ಮತ್ತು ವೇಳೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
* ಕಾಲೇಜಿನಲ್ಲಿ ಪ್ರವೇಶ ಪಡೆಯಲು ಕೊನೆಯ ದಿನಾಂಕ: ‘Choice 1’ ಆಯ್ಕೆ ಮಾಡಿರುವ ಅಭ್ಯರ್ಥಿಗಳು ಪರಿಶೀಲನಾ ಚೀಟಿಯಲ್ಲಿ (Verification Slip) ತಿಳಿಸಲಾದ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಂಚಿಕೆಯಾದ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಅಕ್ಟೋಬರ್ 23, 2026ರ ಸಂಜೆ 5:30ರವರೆಗೆ ಗಡುವು ನಿಗದಿಪಡಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ಗೆ (kea.kar.nic.in) ಭೇಟಿ ನೀಡಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
