ಚಿಲ್ಲರೆ ಹಣಕ್ಕಾಗಿ ಕರ್ತವ್ಯ ನಿರತ ಮಹಿಳಾ ಕಂಡೆಕ್ಟರ್ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.
ನಗರದ 2ನೇ ಘಟಕದಲ್ಲಿ ನಿರ್ವಾಹಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶೋಭಾ ಗಾಣಗಿ ಎಂಬುವರು ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.
ಬೆಳಗಾವಿ ಹಾಗೂ ಹೊನಗಾ ನಡುವೆ ಸಂಚರಿಸುವ ನಗರ ಸಾರಿಗೆ ಬಸ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯಮನಾಪೂರ ಗ್ರಾಮದಿಂದ ಬಸನಲ್ಲಿ ಸಂಚರಿಸುತ್ತಿದ್ದ ಯುವಕ ಮಹಿಳಾ ನಿರ್ವಾಹಕಿಯೊಂದಿಗೆ ಬಸ್ ನಲ್ಲಿ ಚಿಲ್ಲರೆ ಕೊಡುವ ವಿಚಾರದಲ್ಲಿ ಯುವಕ ಗಲಾಟೆ ನಡೆಸಿದ್ದಾನೆ.
ಅಲ್ಲದೇ ಯುವಕ ಅವ್ಯಾಚ್ಛ ಶಬ್ಧಗಳಿಂದ ನಿಂದಿಸುವಾಗ ಯಾರಿಗೆ ಬೈಯುತ್ತಿರುವೆ ಎಂದು ಜೋರು ಮಾಡಿ ಕಂಡಕ್ಟರ್ ಕೇಳಿದ್ದಾರೆ ಅಷ್ಟಕ್ಕೇ ಯುವಕ ಲೇಡಿ ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾನೆ. ಬಳಿಕ ನಿರ್ವಾಹಕಿಗೆ ಅವ್ಯಾಚ್ಛ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


