ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆ ಖಾಲಿ ಇತ್ತು. ಎರಡನೇ ಉಪ ಲೋಕಾಯುಕ್ತರ ಹುದ್ದೆಗೆ ಬಿ.ವೀರಪ್ಪ ಅವರನ್ನು ಐದು ವರ್ಷಗಳ ವರೆಗೆ ನೇಮಿಸಿ ರಾಜ್ಯಪಾಲರು ಆದೇಶದಲ್ಲಿ ತಿಳಿಸಿದ್ದಾರೆ.
ಎರಡನೇ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ವಿಪಕ್ಷ ನಾಯಕ ಆರ್.ಅಶೋಕ್ ಅವರೊಂದಿಗೆ ಸಮಾಲೋಚನೆ ನಡೆಸಿ ನ್ಯಾ.ಬಿ.ವೀರಪ್ಪ ಅವರನ್ನು ನೇಮಿಸುವಂತೆ ಜೂ.24ರಂದು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA