ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್ ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಠಾಣೆ ವ್ಯಾಪ್ತಿಯ ನಿವಾಸಿ ಅಬ್ದುಲ್ ಹಫೀಜ್ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


