ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನೇ ತೆಲಂಗಾಣದ ನೂತನ ಮುಖ್ಯಮಂತ್ರಿಯನ್ನಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಘೋಷಣೆ ಮಾಡಿದ್ದಾರೆ.
ಡಿಸಿಎಂ ಆಗಿ ಯಾರನ್ನು ನೇಮಿಸಬೇಕು ಎಂದು ಶೀಘ್ರದಲ್ಲೇ ತಿಳಿಸುವುದಾಗಿ ಅವರು ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಬೀಗಿದೆ.
ಸಿಎಂ ಹೆಸರನ್ನು ಅಧಿಕೃತ ಘೋಷಣೆ ಮಾಡಲು ಹೈಕಮಾಂಡ್ ಮೊರೆ ಹೋಗಲಾಗಿತ್ತು. ಇನ್ನು ರೇವಂತ್ ರೆಡ್ಡಿ ಸಿಎಂ ಆಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.