nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 13, 2023

    ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminOctober 13, 2023No Comments2 Mins Read
    siddharamayya

    ಬೆಂಗಳೂರು: ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ.  ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಗೃಹ ಕಚೇರಿ ಕೃಷ್ಣಾದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಈ ಸೂಚನೆ ನೀಡಿದರು. 2023ರ ಏಪ್ರಿಲ್‌ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ- 22304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602.37 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696.35 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ. ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಲು ಮುಖ್ಯಮಂತ್ರಿಗಳು  ಸೂಚಿಸಿದರು.


    Provided by
    Provided by

    ರಾಜ್ಯದಲ್ಲಿ ವಿವಿಧ ಇಲಾಖೆಗಳಡಿ ಇರುವ 34 ಸಾವಿರಕ್ಕೂ ಹೆಚ್ಚು ಕೆರೆಗಳ ಸಮಗ್ರ ನಿರ್ವಹಣೆಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸುವ ಕುರಿತು ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಈ ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಕೆರೆ ಬಳಕೆದಾರರ ಸಂಘಗಳ ಬಲವರ್ಧನೆಗೆ ಸಂಬಂಧಿಸಿದಂತೆ ಪ್ರಸ್ತಾವನೆ ಹಣಕಾಸು ಇಲಾಖೆಗೆ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅಧಿಕಾರೇತರ ಸದಸ್ಯರ ನೇಮಕ ಮಾಡುವ ಸಂದರ್ಭದಲ್ಲಿ ಕೆರೆಗಳ ಸಂರಕ್ಷಣೆಯ ಪರಿಣತರು ಹಾಗೂ ಕಾಳಜಿ ಉಳ್ಳವರನ್ನು ಆಯ್ಕೆ ಮಾಡಲು ಸೂಚಿಸಿದರು.

    ಸಣ್ಣ ನೀರಾವರಿ ಇಲಾಖೆ ಹಾಗೂ ಭಾರಿ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಮೀನುಗಾರಿಕೆ ಗುತ್ತಿಗೆ ನೀಡುವ ಮೂಲಕ ಸಂಪನ್ಮೂಲ ಕ್ರೋಢೀಕರಿಸುವ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು.

    ಸಂಸ್ಕರಿಸಿದ ನೀರಿನ ಏತ ನೀರಾವರಿ ಯೋಜನೆಗಳು: ಕೆ.ಸಿ. ವ್ಯಾಲಿ ಎರಡನೇ ಹಂತ, ಆನೇಕಲ್‌ ಏತ ನೀರಾವರಿ ಯೋಜನೆ, ಹೊಸಕೋಟೆ ಏತ ನೀರಾವರಿ ಯೋಜನೆ, ಬೆಂಗಳೂರು ಪೂರ್ವ ತಾಲ್ಲೂಕು ಏತ ನೀರಾವರಿ ಯೋಜನೆ, ಬಾಗೇಪಲ್ಲಿ ಏತ ನೀರಾವರಿ ಯೋಜನೆ, ವೃಷಭಾವತಿ ವ್ಯಾಲಿ ಏತ ನೀರಾವರಿ ಯೋಜನೆ ಪ್ರಗತಿಯಲ್ಲಿದೆ. ಎರಡನೇ ಹಂತದ ಸಂಸ್ಕರಿಸಿದ ನೀರು ಸುರಕ್ಷಿತವಾಗಿದೆ. ಆದರೆ ನಗರ ಸ್ಥಳೀಯ ಸಂಸ್ಥೆಗಳು ಕೊಳಚೆ ನೀರನ್ನು ಸಂಸ್ಕರಿಸದೆ ಬಿಡುವುದರಿಂದ ಕೆಲವು ಕೆರೆಗಳಿಗೆ ಕೊಳಚೆ ನೀರು ಹರಿಯುತ್ತಿರುವ ಸಮಸ್ಯೆಯ ಬಗ್ಗೆ ಸಚಿವ ಭೋಸರಾಜು ಅವರು ಮುಖ್ಯಮಂತ್ರಿಗಳ ಗಮನ ಸೆಳೆದರು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೂ ಪತ್ರ ಬರೆದಿರುವುದಾಗಿ ಸಚಿವ ಭೋಸರಾಜು ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

    ಕೆ.ಸಿ. ವ್ಯಾಲಿ ಮೊದಲ ಹಂತದ ಯೋಜನೆಯನ್ನು ತಮ್ಮ ಹಿಂದಿನ ಅವಧಿಯಲ್ಲಿ ಅನುಷ್ಠಾನಗೊಳಿಸಿದ್ದು, ಅದರಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಸಚಿವರು ವಿವರಿಸಿದರು.

    ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ: ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಲು ಸೂಚಿಸಿದರು.

    ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಮೂಲಕ ಸಭೆಯಲ್ಲಿಯೇ ಸೂಚಿಸಿದರು.

    ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ  ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸುವಂತೆ ನಿರ್ದೇಶನ ನೀಡಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.