ತುಮಕೂರು: 132–ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಂದೋಲನವು ನಿಗಧಿತ ದಿನಾಂಕದಂದು ಬೆಳಿಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಹಾಗೂ 132–ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ಈಗಾಗಲೇ 2025ರ ಜನವರಿ 1ಕ್ಕೆ ಅನ್ವಯವಾಗುವಂತೆ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಚುರಪಡಿಸಲಾಗಿದ್ದು, ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಗದಿತ ನಮೂನೆಯಲ್ಲಿ ನವೆಂಬರ್ 28ರೊಳಗಾಗಿ ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿಕೊಂಡು ಹೆಸರು ಸೇರ್ಪಡೆ/ತಿದ್ದುಪಡಿ/ಸ್ಥಳಾಂತರಕ್ಕೆ ಸಂಬಂಧಿಸಿದಂತೆ ನಿಗದಿತ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q