ಬೆಳಗಾವಿ: ಏಪ್ರಿಲ್ 10ರೊಳಗೆ ಬಸನಗೌಡ ಪಾಟೀಲ ಯತ್ನಾಳ್ ಅವರ ಉಚ್ಛಾಟನೆ ಆದೇಶ ಹಿಂಪಡೆಯಬೇಕು, ಇಲ್ಲದಿದ್ದರೆ ಏ.13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಹೈಕಮಾಂಡ್ ಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವ ಕ್ರಮ ಖಂಡಿಸಿ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ ಪಂಚಮಸಾಲಿ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಉತ್ತರ ಕರ್ನಾಟಕದ “ಹಿಂದುತ್ವ ಪರ” ಮತ್ತು “ಅಭಿವೃದ್ಧಿ ಪರ” ನಾಯಕರನ್ನು ನಿಗ್ರಹಿಸುವ ಪಿತೂರಿ ಇದಾಗಿದೆ ಎಂದು ಕಿಡಿಕಾರಿದ ಸ್ವಾಮೀಜಿ, ಬಿ ಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಕುತಂತ್ರದಿಂದ ಉಚ್ಚಾಟನೆ ಮಾಡಲಾಗಿದೆ. ಇದನ್ನು ಇಡೀ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಪಂಚಮಸಾಲಿ ಮುಖಂಡರಾದ ಶಶಿಕಾಂತ ಪಡಸಲಗಿ, ರಮೇಶಗೌಡ ಪಾಟೀಲ, ಆರ್.ಸಿ. ಪಾಟೀಲ, ಗುಂಡು ಪಾಟೀಲ, ಶಿವಾನಂದ ತಂಬಾಕಿ ಸೇರಿ ಮತ್ತಿತರರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4