ತುಮಕೂರು: ಸಿದ್ಧರಾಮಯ್ಯ ಇರುವುದರಿಂದ ನಾನು ರಾಜಕಾರಣ ಮಾಡುತ್ತಿರುವುದು. ಅವರಿಲ್ಲದಿದ್ದರೇ ರಾಜಕೀಯ ಬಿಡುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಕಾಂಗ್ರೆಸ್ನಲ್ಲಿ ಮೂರು ಪವರ್ ಸೆಂಟರ್ ಇದೆ. ಹೈಕಮಾಂಡ್ , ಕೆಪಿಸಿಸಿ ಅಧ್ಯಕ್ಷ ಹಾಗೂ ಸಿಎಂ ಮೂವರು ಪವರ್ ಸೆಂಟರ್ ಇದೆ. ಸಿಎಂ ಬದಲಾವಣೆ ಅನ್ನೋದನ್ನು ಕಾಲ ನಿರ್ಣಯ ಮಾಡಲಿದೆ. ಕೆಲ ಮಾಧ್ಯಮದವರು ರಾಜಣ್ಣನವರು ಸಿದ್ದರಾಮಯ್ಯನವರಿಂದ ದೂರವಾಗಿದ್ದಾರೆಂದು ಸುದ್ದಿ ಮಾಡಿದ್ದಾರೆ. ನಾನು ಯಾವತ್ತೂ ಸಿಎಂ ಸಿದ್ದರಾಮಯ್ಯರ ಜೊತೆ ಇದ್ದೇನೆ. ಇವತ್ತೂ, ನಾಳೆ, ಯಾವತ್ತೂ ನಾನು ಸಿದ್ದರಾಮಯ್ಯ ಬಣ ಎಂದರು.
ಆಗಸ್ಟ್– ಸೆಪ್ಟೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕ್ರಾಂತಿ ಎಂದರೆ ಹಸಿರು ಕ್ರಾಂತಿಯೂ ಆಗಬಹುದು ಅಲ್ವಾ? ಬರೀ ಕಾಂಗ್ರೆಸ್ ನಲ್ಲಿ ಮಾತ್ರ ಕ್ರಾಂತಿ ಎಂದು ಯಾಕೆ ಭಾವಿಸುತ್ತೀರಾ? ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕೇಂದ್ರದಲ್ಲೂ ಕ್ರಾಂತಿ ಆಗಬಹುದು. ಬಿಜೆಪಿಯಲ್ಲೂ 75 ವರ್ಷದ ನಂತರ ಹುದ್ದೆಯಿಂದ ಕೆಳಗೆ ಇಳಿಬೇಕು. 75 ವರ್ಷ ಆದ ಕಾರಣ ಅಡ್ವಾಣಿಯನ್ನು ಪ್ರಧಾನಿ ಹುದ್ದೆಯಿಂದ ತಪ್ಪಿಸಿದರು, ಅಲ್ಲೂ ಕ್ರಾಂತಿ ಆಗಬಹುದು. ರಾಜಕಾರಣ ಬದಲಾವಣೆಯ ನಿಯಮ ಹೊಂದಿದೆ. ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದರು.
ಕ್ರಾಂತಿ ಎಂದರೇ ಹಲವಾರು ರೀತಿಯ ಕ್ರಾಂತಿ ಇದೆ. ಜಗಜೀವನ್ ರಾಮ್ ಹಸಿರು ಕ್ರಾಂತಿ ಮಾಡಿಲ್ವಾ? ರಷ್ಯಾದ ಕ್ರಾಂತಿಯೂ ಸಹ ಅಕ್ಟೋಬರ್ ನಲ್ಲಾಗಿರೋದು. ನಾನು ಹೇಳಿದ ತಕ್ಷಣ ಬರೀ ಕಾಂಗ್ರೆಸ್ನಲ್ಲಿ ಮಾತ್ರ ಕ್ರಾಂತಿ ಆಗುತ್ತದೆ ಅಂದುಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.
ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕ್ರೇಂದ್ರ ಸರ್ಕಾರದಲ್ಲೂ ಸಹ ಬದಲಾವಣೆ ನಿರೀಕ್ಷೆ ಮಾಡಬಹುದು. ಆರ್ ಎಸ್ ಎಸ್ ನವರ ಸೆಟ್ ಆಫ್ ಪ್ರಿನ್ಸಿಪಲ್ ನಂತೆ 75 ವರ್ಷದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಕ್ಕಿಲ್ಲ. ಹಾಗಾಗಿಯೇ ಅಡ್ವಾಣಿಗೆ ಪ್ರಧಾನಿ ಸ್ಥಾನ ಸಿಕ್ಕಿಲ್ಲ. ಈಗ ಅದೇ ಪ್ರಿನ್ಸಿಪಲ್ ಮೋದಿಯವರಿಗೂ ಅನ್ವಯಿಸುತ್ತದೆ. ಅದು ಒಂದು ಬದಲಾವಣೆ ಕ್ರಾಂತಿ ಅಲ್ವಾ? ಅದನ್ನು ಯಾಕೆ ನೀವು ಊಹೆ ಮಾಡಲ್ಲ? ಬರೀ ಕರ್ನಾಟಕದ ಕಾಂಗ್ರೆಸ್ ಪಾರ್ಟಿಯನ್ನು ಯಾಕೆ ಊಹೆ ಮಾಡ್ತೀರಾ? ಎಂದು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW