ರಿಚರ್ಡ್ ಆಂಟನಿ ಚಿತ್ರದ ಸಿನಿಮಾ ಶೂಟಿಂಗ್ ಮೇ 1ರಿಂದ ಆರಂಭವಾಗಲಿದೆ ಎಂದು ನಟ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ನಿನ್ನೆ ಉಡುಪಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಅವರು ಮಾತನಾಡುತ್ತಿದ್ದರು.
ರಿಚರ್ಡ್ ಆಂಟನಿ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ನಮ್ ಟೀಮ್ ಉಡುಪಿ ತಲುಪಲಿದೆ. ಮೇ 1 ರಿಂದ ಚಿತ್ರೀಕರಣ ಶುರು ಮಾಡುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
1980–90 ರ ದಶಕದಲ್ಲಿ ನಡೆಯುವ ಕಥೆಯನ್ನು ರಕ್ಷಿತ್ ಶೆಟ್ಟಿ ಹೇಳಲು ಹೊರಟಿದ್ದಾರೆ. ಈ ಸಿನಿಮಾದ ಶೇ.50ರಷ್ಟು ಶೂಟಿಂಗ್ ಉಡುಪಿಯಲ್ಲೇ ನಡೆಯಲಿದೆಯಂತೆ!
ಇನ್ನೂ ಈ ಸಿನಿಮಾ ನಿರ್ಮಾಣವನ್ನು ಯಾವ ಸಂಸ್ಥೆ ಮಾಡಲಿದೆ ಎನ್ನುವ ಮಾಹಿತಿಯನ್ನು ಅವರು ನೀಡಲಿಲ್ಲ. ಇತ್ತೀಚೆಗೆ ಹೊಂಬಾಳೆ ಮತ್ತು ರಕ್ಷಿತ್ ನಡುವೆ ಬಿರುಕು ಮೂಡಿತ್ತು ಬೇರೊಂದು ಸಂಸ್ಥೆಯು ರಿಚರ್ಡ್ ಆಂಟನಿ ಚಿತ್ರವನ್ನು ನಿರ್ಮಾಣ ಮಾಡಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದ್ರೆ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಆಪ್ತರು ಹೇಳುವಂತೆ, ‘ಸಿನಿಮಾ ಮುಹೂರ್ತಕ್ಕೆ ಹೊಂಬಾಳೆಯೇ ತಯಾರಿ ಮಾಡಿಕೊಳ್ಳುತ್ತಿದೆ ಹಾಗಾಗಿ ಈ ರೀತಿಯ ಪ್ರಶ್ನೆಗಳು ವಾಸ್ತವವಲ್ಲ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA