ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಕರ್ನಾಟಕದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಶಾಲಾ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ರ ಪರಿಣಾಮಕಾರಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಾಗಾರದಲ್ಲಿ ಮಕ್ಕಳ ರಕ್ಷಣಾ ಆಯೋಗ ತಿಪ್ಪೇಸ್ವಾಮಿ ಕೆ.ಟಿ. ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಧರ್ , ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ, ಕಾರ್ಯದರ್ಶಿ ವಾಸಂತಿ ಉಪ್ಪಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗೌರವಾನ್ವಿತ ಸದಸ್ಯರುಗಳಾದ ವೆಂಕಟೇಶ್, ಶಶಿಧರ್ ಕೋಸಂಬೆ ಹಾಗೂ ಮಂಜು ಆನಂದ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q