ಮಂಡ್ಯ: ಕಲ್ಲು ತೂರುವವರು, ಗಲಭೆ ಸೃಷ್ಟಿಸುವವರಿಗೆ ಈ ಸರ್ಕಾರದಲ್ಲಿ ಕಾನೂನಿನ ಭಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಭೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಣ್ಣ ಗಲಾಟೆ ಎಂದು ಹೇಳಿರುವುದು ದುರ್ದೈವದ ಸಂಗತಿ. ಮನೆಗಳಿಗೆ ಕಲ್ಲು ತೂರಿದ್ದಾರೆ. ಕೋಲಾರದಲ್ಲಿಯೂ ಇದೇ ರೀತಿ ಘಟನೆ ನಡೆಯಿತು. ಸರ್ಕಾರ ಇಂತಹ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ ಬಾಲಿಶವಾಗಿದೆ ಎಂದು ಹೇಳಿದರು.
ಸರ್ಕಾರದ ಈ ನಡವಳಿಕೆಯಿಂದಲೇ ಜೂಜುಕೋರರು, ಗಲಭೆಕೋರರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದರು.


