ಬೆಂಗಳೂರು: ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಮಸಿ ಬಳಿದಿದೆ.
ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು, ರಾಷ್ಟ್ರ ಕವಿ ಕುವೆಂಪು ರಚಿಸಿದ ನಾಡಗೀತೆಯನ್ನು ಅವಮಾನಿಸಿದ ಬಗ್ಗೆ ಸ್ವಾಮೀಜಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನಾನು ಆ ರೀತಿ ಹೇಳಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಋಷಿ ಕುಮಾರಸ್ವಾಮಿ ಸಮರ್ಥನೆ ನೀಡಲು ಮುಂದಾಗಿದ್ದಾರೆ. ಇದಾದ ಬಳಿಕ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ.
ನಾಡಗೀತೆಯನ್ನ ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆಂದು ಕಾಳಿ ಸ್ವಾಮೀಜಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸ್ವಾಮೀಜಿ ಮೇಲೆ ಮಸಿ ಬಳಿಯುವ ಮೂಲಕ ಹೇಳಿಕೆಯನ್ನು ಖಂಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


