ತುಮಕೂರು: ಬಿಸಿಲಿನ ತಾಪಮಾನಕ್ಕೆ ಎಲ್ಲೆಂದರಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು ಇದು ತುಮಕೂರು ಜನರಿಗೆ ಆತಂಕ ಸೃಷ್ಟಿಸಿದೆ. ಒಂದೇ ದಿನಕ್ಕೆ 12 ಹಾವುಗಳನ್ನು ಉರಗ ತಜ್ಞರು ರಕ್ಷಣೆ ಮಾಡಿದ್ದಾರೆ. ತುಮಕೂರು ಬಿಸಿಲಿನ ತಾಪಮಾನಕ್ಕೆ ಹಾವುಗಳು ಮನೆಯೊಳಗೆ, ಕಾರು, ಬೈಕ್ ಒಳಗೆ ಬಂದು ಸೇರಿಕೊಳ್ಳುತ್ತವೆ. ತುಮಕೂರಿನ ವರಂಗಲ್ ಫೌಂಡೇಶನ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆಯ ಉರಗ ತಜ್ಞ ದಿಲೀಪ್ ಅವರು ಒಂದೇ ದಿನಕ್ಕೆ 12 ಹಾವುಗಳನ್ನು ರಕ್ಷಣೆ ಮಾಡಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ತುಮಕೂರು ಹೊರವಲಯದ ಹೊನ್ನುಡ್ಕೆ ಹ್ಯಾಂಡ್ ಪೋಸ್ಟ್ ನಲ್ಲಿ ಮಾಯರಂಗಯ್ಯ ಎಂಬುವವರ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟಿ ಒಳಗಡೆ ನಾಗರಹಾವು ಸೇರಿಕೊಂಡಿತ್ತು. ಅದನ್ನು ಕಂಡು ಭಯ ಬೀತರಾದ ರಂಗಯ್ಯನವರು ತುಮಕೂರಿನ ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಊರಗ ರಕ್ಷಣಾ ಸಂಸ್ಥೆಗೆ ಕರೆ ಮಾಡಿದ್ದರು.
ಸ್ಥಳಕ್ಕೆ ಬಂದ ಉರಗ ತಜ್ಞ ದಿಲೀಪ್ ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಒಳಗೆ ಸೇರಿದ್ದ ನಾಗರಹಾವನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296