ತುಮಕೂರು: ಒಂದೇ ದಿನ ರಾತ್ರಿ ಸುರಿದ ಭಾರೀ ಮಳೆಗೆ ಜಯಮಂಗಲಿ ನದಿ ಮೈತುಂಬಿ ಹರಿಯುತ್ತಿದೆ. ಇದು ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಭಾಗದಲ್ಲಿ ಹರಿಯುವ ನದಿಯಾಗಿದೆ.
ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ– ಕಾಳೇನಹಳ್ಳಿ ನಡುವಿನ ರಸ್ತೆ ಜಲಾವೃತಗೊಂಡಿದೆ. ತೋಟ- ಹೊಲಗಳು ಜಲಾವೃತವಾಗಿದ್ದು ಜಯಮಂಗಲಿ ನದಿ ತುಂಬಿ ಹರಿದಿದ್ದಕ್ಕೆ ರೈತರಲ್ಲಿ ಸಂತಸ ಮೂಡಿದೆ. ತುಮಕೂರು ಜಿಲ್ಲಾದ್ಯಾಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ.
ತುಂಬಿ ಹರಿದ ಹಳ್ಳ ಕೊಳ್ಳಗಳು
ತುಮಕೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿವೆ. ಹಳ್ಳ ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಬಹುತೇಕ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ನಂದಿಹಳ್ಳಿ ಯಿಂದ ಗೊಲ್ಲರಹಟ್ಟಿಗೆ ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದಿದೆ.
ಕೊರಟಗೆರೆ ತಾಲೂಕು ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಹರಿಯುವ ಜಯಮಂಗಲಿ ನದಿ ನೀರು ಉಕ್ಕಿ ಹರಿಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q