ಪಾವಗಡ: ಪಾವಗಡ ತಾಲೂಕಿನಲ್ಲಿ ಭರಣಿ ಮಳೆ ಉತ್ತಮವಾಗಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ಪಾವಗಡ ಜನತೆಯ ರೈತರು ಇಲಾಖೆಯಲ್ಲಿ ನೀಡುತ್ತಿರುವ ಬಿತ್ತನೆ ಬೀಜಗಳು ವಿವಿಧ ತಳಿಗಳಾದ ಶೇಂಗಾ, ಹೆಸರು, ಕಾಳು, ಹಲಸಂದೆ, ತೊಗರಿ, ಭತ್ತ, ರಾಗಿ ಇನ್ನು ಮುಂತಾದ ಬಿತ್ತನೆ ಬೀಜಗಳನ್ನು ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ವೆಂಕಟರಮಣಪ್ಪ ಕರೆ ನೀಡಿದರು.
ಕೃಷಿ ಉನ್ನತ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯ ಮೂರ್ತಿ ಕೃಷಿ ಇಲಾಖೆ ಅಧಿಕಾರಿಗಳ ರಾಮಾಂಜಿನಪ್ಪ, ವೇಣು, ಮಧು ಸಂಸದ್ ಸಂಸ್ಥೆಯ ಪರವಾಗಿ ಕೆ ಹೋ ಎಫ್ ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು. ಕೆ.ಓ.ಎಫ್.ಬಾಲಾಜಿ ಹಾಗೂ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಂತಾದ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ. ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5