ಲಂಡನ್: ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಲಂಡನ್ ನಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟ ಘಟನೆ ನಡೆದಿದೆ. ಚೇಸ್ತಾ ಕೊಚ್ಚಾರ (36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಚೇಸ್ತಾ ಕೊಚ್ಚಾರ ಅವರು ಗುರುಗ್ರಾಮ ಮೂಲದವರು.
‘ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್’ನಲ್ಲಿ ಪಿಎಚ್.ಡಿ. ಅಧ್ಯಯನ ಮಾಡುತ್ತಿದ್ದ ಚೇಸ್ತಾ ಕೊಚ್ಚಾರ ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ಕಾಲೇಜಿನಿಂದ ಸೈಕಲ್ ನಲ್ಲಿ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ಚೇಸ್ತಾ ಅವರ ಮೇಲೆ ಲಾರಿಯೊಂದು ಹರಿದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸನಿಹದ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಂಡನ್ ಮೆಟ್ರೊಪಾಲಿಟನ್ ಪೊಲೀಸರು, ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ತನಿಖೆಗೆ ಸಹಕರಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಚೇಸ್ತಾ ಕೊಚ್ಚಾರ ಅವರು ಗುರುಗ್ರಾಮ ಮೂಲದವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296