ಬೀದರ್: ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಔರಾದ್–ಬಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವನಿಕರಿಗೆ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನಿರ್ದೇಶನದಂತೆ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ವಸೀಮ್ ಪಟೇಲ್ (ಕಾ.ಸೂ), ಪಿಎಸ್ ಐ ರೇಣುಕಾ (ಅ.ವಿ), ರವರು ತಮ್ಮ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಸವಾರರನ್ನು ತಡೆದು, ಅವರಿಗೆ ದಂಡ ಹಾಕದೇ ಹೆಲ್ಮೆಟ್ ವಿತರಿಸುವ ಮೂಲಕ, ಹೆಲ್ಮೆಟ್ ನ ಮಹತ್ವದ ಬಗ್ಗೆ ಹಾಗೂ ಹೆಲ್ಮೆಟ್ ಧರಿಸದೇ ಇರುವುದರಿಂದ ಆಗುತ್ತಿರುವ ಸಾವು ನೋವುಗಳ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4