ತಿಪಟೂರು: ಆರ್ ಎಸ್ ಎಸ್ ತತ್ವ ಸಿದ್ಧಾಂತವನ್ನು ತುಂಬಿ ವಿದ್ಯಾರ್ಥಿಗಳ ಮನಸ್ಸನ್ನು ಕಲುಶಿತಗೊಳಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಈ ಕೂಡಲೇ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ರನ್ನು ವಜಾ ಮಾಡಬೇಕು ಎಂದು ಸಾಹಿತಿ ಗಂಗಾಧರಯ್ಯ ಒತ್ತಾಯಿಸಿದರು.
ನಗರದಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನ ನಡೆದಿದೆ. ಸರ್ಕಾರ ಮನಬಂದಂತೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ ಎಂಧು ಅವರು ಆಕ್ರೋಶ ವ್ಯಕ್ತಪಡಿಸಿದರು.
ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಬೇಕು. ಇಲ್ಲವೇ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆ ನೀಡಬೇಕು ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದ್ದರೂ ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎಂದು ಹೇಳಿದರು.
ಶಿಕ್ಷಣ ಸಚಿವರೇ ನಿಮಗೆ ಧೈರ್ಯವಿದ್ದರೆ ಬಸವಣ್ಣ, ಅಂಬೇಡ್ಕರ್, ಕುವೆಂಪು ನನಗೆ ಇಷ್ಟ ಇಲ್ಲ ಎಂದು ಹೇಳಿ, ಚುನಾವಣೆ ಎದುರಿಸಿ ಗೆದ್ದು ಬನ್ನಿ. ಚುನಾವಣಾ ಸಮಯದಲ್ಲಿ ಅವರೆಲ್ಲ ಬೇಕು. ಆದರೆ ಪಠ್ಯಪುಸ್ತಕದಲ್ಲಿ ಏಕೆ ಬೇಡ ಎಂದು ಅವರು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹೊನ್ನವಳ್ಳಿ ಕೆ.ಎಸ್. ಸ್ವಾಮಿ ಕುಂದೂರು ತಿಮ್ಮಯ್ಯ ಮನೋಹರ್ ಪಟೇಲ್ ಬಸ್ತಿಯಲ್ಲಿ ರಾಜಣ್ಣ ಉಜ್ಜಜ್ಜಿ ರಾಜಣ್ಣ ಸಾಹಿತಿಗಳು ರೈತಸಂಘದ ಮುಖಂಡರು ಇದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5