nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    ಕೊರಟಗೆರೆ June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    By adminJune 19, 2026No Comments2 Mins Read
    rotary

    ವರದಿ ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ಆರೋಗ್ಯ, ಶಿಕ್ಷಣ, ಪರಿಸರ ಬಗ್ಗೆ ರೋಟರಿ ಸಂಸ್ಥೆ ವಿಶೇಷ ಕಾಳಜಿವಹಿಸಿದ್ದು, ಸಮಾಜಮುಖಿ ಕೆಲಸದಲ್ಲಿ ರೋಟರಿ ಸಂಸ್ಥೆ ಮಾದರಿಯಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ಕೆ. ಶ್ಲಾಘಿಸಿದರು.

    ಕೊರಟಗೆರೆಯ ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿ ರೋಟರಿ ಮಹಿಳಾ ಸಬಲೀಕರಣ ಯೋಜನೆಯಡಿ ರೋಟರಿ ಕ್ಲಬ್ ಕೊರಟಗೆರೆ ಮತ್ತು ರೋಟರಿ ಮಹಾಲಕ್ಷ್ಮಿ ಬೆಂಗಳೂರು ಹಾಗೂ ರೋಟರಿ ಬೆಂಗಳೂರು ಉತ್ತರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆಟೋರಿಕ್ಷಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಅವರ ತಾಲ್ಲೂಕಿನ ದೇವರಹಳ್ಳಿ ಬೆಟ್ಟದಲ್ಲಿ 10 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಈ ಹಿಂದೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಚಾಲನೆ ನೀಡಿ ಯಶಸ್ವಿಗೊಳಿಸಿದರು. ಪರಿಸರದ ಉಳಿವಿಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತದ ಜೊತೆ ಕೈ ಜೋಡಿಸುವಂತೆ ರೋಟರಿ ಸಂಸ್ಥೆ ಮುಖ್ಯಸ್ಥರಿಗೆ ತಿಳಿಸಿದರು.

    ರೋಟರಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಮಾತನಾಡಿ, ರೋಟರಿ ಸಂಸ್ಥೆ ಪರಿಸರಕ್ಕೆ, ಶಿಕ್ಷಣಕ್ಕೆ, ರೈತಾಪಿ ವರ್ಗಕ್ಕೆ ಹೆಚ್ಚಿನ ಒತ್ತು ನೀಡಿದೆ, ಭಾರತ ೧೩೫ ಕೋಟಿ ಜನಸಂಖೈ ಹೊಂದಿದೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪೋಲಿಯೋ ಲಸಿಕೆ ಸಿಗಲು ರೋಟರಿ ಸಂಸ್ಥೆ ಪ್ರಮುಖ ಕಾರಣವಾಗಿದೆ ಎಂದು ಜಿಲ್ಲಾ ರೋಟರಿ ಉಮೇಶ್ ತಿಳಿಸಿದರು.

    ಕಾನ್ಫರೆನ್ಸ್ ನಿರ್ದೇಶಕ ಬಿಳಿಗೆರೆ ಶಿವಕುಮಾರ್ ಮಾತನಾಡಿ, ರೋಟರಿ ಕ್ಲಬ್‌ಯಿಂದ ಈಗಾಗಲೇ ೬ ಆಟೋ ರಿಕ್ಷಾ ವಿತರಣೆ ಮಾಡಲಾಗಿದೆ, ೮ ವರ್ಷಗಳಲ್ಲಿ 12 ಸಾವಿರ ಜನರಿಗೆ ಹೃದಯ ಶಾಸ್ತ್ರ ಚಿಕಿತ್ಸೆ ಮಾಡಿದ್ದು, ಜೂ.28 ರಂದು ಪೋಷಕರು ಕಡ್ಡಾಯವಾಗಿ 5 ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸುವಂತೆ ಕಿವಿಮಾತು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಉಮೇಶ್ ಕೆ.ಎಸ್, ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ್, ರೋಟರಿ ಸಿದ್ಧರಬೆಟ್ಟ ಅಧ್ಯಕ್ಷ ಬಾಲಾಜಿ ದರ್ಶನ್, ಜಂಟಿ ಕಾರ್ಯದರ್ಶಿ ಚೇತನ್ ದಾಸರಹಳ್ಳಿ, ಕಾರ್ಯದರ್ಶಿ ನರಸಿಂಮೂರ್ತಿ ತಿಳಿಸಿದರು.

     ಆರ್ಥಿಕ ಪರಿಸ್ಥಿತಿಯಿಂದ ಕುಟುಂಬದ ನಿರ್ವಹಣೆ ಕಷ್ಟಕರವಾಗಿತ್ತು. ಸ್ವಾವಲಂಭಿ ಜೀವನ ರೂಪಿಸಿಕೊಳ್ಳಬೇಕೆಂದು ಅಂದುಕೊಂಡ ವೇಳೆ ರೋಟರಿ ಕ್ಲಬ್ ಎಲೆಕ್ಟ್ರಿಕ್ ಆಟೋ ರಿಕ್ಷಾ ನೀಡಿ ಸಹಕಾರಿಯಾಗಿದೆ. ರೋಟರಿ ಕ್ಲಬ್ ಎಲ್ಲಾ ಮುಖ್ಯಸ್ಥರಿಗೆ ಹೃದಯ ಪೂರ್ವಕ ಧನ್ಯವಾದ ತಿಳಿಸುತ್ತೇನೆ.

    — ಶುಭ ಕೆ.ಎಸ್,  ಆಟೋ ಚಾಲಕಿ.

     

     ಕೊರಟಗೆರೆ ರೋಟರಿ ಕ್ಲಬ್ ಪ್ರಾರಂಭಿಸಿ 2ವರ್ಷವಾಗಿದೆ, 3 ರೋಟರಿ ಕ್ಲಬ್‌ ನ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ ಅಗ್ರಹಾರದ ಬಡ ಮಹಿಳೆಯೊಬ್ಬರಿಗೆ  ಎಲೆಕ್ಟ್ರಿಕ್ಬಾಆಟೋರಿಕ್ಷಾ ವಿತರಣೆ ಮಾಡಲಾಗಿದೆ, ರೋಟರಿ ಕ್ಲಬ್‌ಗೆ 120  ವರ್ಷಗಳ ಇತಿಹಾಸವಿದೆ. ಈಗಾಗಲೇ ಕ್ಲಬ್‌ನ ಹಲವಾರು ಕಾರ್ಯಕ್ರಮಗಳು ಯಶಸ್ವಿ ಕಂಡಿದೆ.

    — ಮಂಜುನಾಥ್, ರೋಟರಿ ಕ್ಲಬ್ ಅಧ್ಯಕ್ಷ, ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.