ತುರುವೇಕೆರೆ: ತುರುವೇಕೆರೆ ವಿಧಾನ ಸಭಾ ಕ್ಷೇತ್ರದ ಆರ್ ಪಿಐ ಅಭ್ಯರ್ಥಿ ಪಿ.ಅಟ್ಟಯ್ಯ ಅವರು ತಾಲೂಕಿನ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಪ್ರತಿ ಹಳ್ಳಿಯಲ್ಲೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಮಾಯಸಂದ್ರ ಹೋಬಳಿಯ ದೊಡ್ಡ ಮಲ್ಲಿಗೆರೆ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ತಾಲೂಕಿನ ಪ್ರತಿ ಹಳ್ಳಿಗೂ ಭೇಟಿ ನೀಡಿದ ವೇಳೆ ನಮ್ಮ ಬೆಂಬಲಕ್ಕೆ ಮತದಾರರು ಒಲವು ತೋರಿದ್ದಾರೆ. ಈ ಬಾರಿ 20ರಿಂದ 30 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ದೊಡ್ಡ ಮಲ್ಲಿಗೆರೆ ಗ್ರಾಮಸ್ಥರು ಹಾಗೂ ಆರ್ ಪಿ ಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ, ಪುಟ್ಟಸ್ವಾಮಿ, ದಯಾನಂದ, ರವೀಶ್, ಹುಚ್ಚಮ್ಮ, ಲಕ್ಷ್ಮಿದೇವಮ್ಮ, ಮಾರಮ್ಮ, ಗೌರಮ್ಮ, ಸಾಕಮ್ಮ, ದೊಡ್ಡಯ್ಯ ಹಾಗೂ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA