ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(RPI) ರಾಜ್ಯ ಮಂಡಳಿ ಸಭೆಯು ಅಕ್ಟೋಬರ್ 13ರ ಗುರುವಾರ ಬೆಂಗಳೂರಿನ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಆರ್ ಪಿಐ ಮುಖಂಡರು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರ್ ಪಿಐಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವರಾದ ರಾಂದಾಸ್ ಅಠವಳೆ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ರಾಜ್ಯ ಮಂಡಳಿಯ ನಿರ್ಣಯಗಳನ್ನು ಅಂಗೀಕರಿಸಲಿದ್ದಾರೆ.
ಬೆಳಗ್ಗೆ 10:30ರಿಂದ 12ಗಂಟೆಯವರೆಗೆ ಸಕ್ರಿಯ ಸದಸ್ಯರ ನೋಂದಣಿ ನಡೆಯಲಿದೆ. ಮಧ್ಯಾಹ್ನ 12ರಿಂದ ಮಧ್ಯಾಹ್ನ 1:30ರವರೆಗೆ ಉದ್ಘಾಟನಾ ಗೋಷ್ಠಿ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮತ್ತೋರ್ವ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಜೆ.ಸಿ.ವೆಂಕಟರಮಣಪ್ಪ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರ ಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿಗಳಾಗಿ ಹೈಕೋರ್ಟ್ ವಕೀಲರಾದ ವಿ.ಉಮಾಶಂಕರ್ ಹಾಗೂ ಬೆಂಗಳೂರಿನ ಹಿರಿಯ ವಕೀಲರಾದ ಸಣ್ಣಾ ನಾಯಕ್ ಅವರು ಕಾರ್ಯನಿರ್ವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ಸಮಾರೋಪ ಗೋಷ್ಠಿ ನಡೆಯಲಿದ್ದು, ಆರ್ ಪಿಐ ರಾಷ್ಟ್ರೀಯ ಅಧ್ಯಕ್ಷರಾದ ರಾಂದಾಸ್ ಅಠವಳೆ ಅವರು ಮುಖ್ಯಭಾಷಣ ಮಾಡಲಿದ್ದಾರೆ. ಡಾ.ಎಂ.ವೆಂಕಟಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಿರ್ಣಯ ಮಂಡನೆ ಮಾಡಲಿದ್ದಾರೆ. ಗೌತಮ ಬುದ್ಧರ ಕುರಿತ ಯಕ್ಷಗಾನ ನಾಟಕ ಪ್ರದರ್ಶನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.
ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಆರ್ ಪಿಐ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ತುಮಕೂರು ಜಿಲ್ಲೆಯ ಎಲ್ಲ ಆರ್ ಪಿಐ ಮುಖಂಡರು ಭಾಗವಹಿಸುವಂತೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಹೆಚ್.ರಾಮಯ್ಯ, ಜಿಲ್ಲಾಧ್ಯಕ್ಷರಾದ ನಟರಾಜು ಜಿ.ಎಲ್. ಹಾಗೂ ಜಿಲ್ಲಾ ಮುಖಂಡರಾದ ಎಂ.ರಾಮಯ್ಯ, ಧನರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy