ತುಮಕೂರು: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ(ಅಠವಳೆ) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಿ.ಹೆಚ್. ರಾಮಯ್ಯ ಅವರನ್ನು ನೇಮಿಸಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಆದೇಶಿಸಿದರು.
ಡಿ.ಹೆಚ್. ರಾಮಯ್ಯನವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಶಿಸ್ತು ಹಾಗೂ ಸಿದ್ಧಾಂತಕ್ಕೆ ಬದ್ಧರಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಈ ವೇಳೆ ನೂತನ ಪ್ರಧಾನ ಕಾರ್ಯದರ್ಶಿ ಡಿ.ಹೆಚ್.ರಾಮಯ್ಯ ಮಾತನಾಡಿ, ಪಕ್ಷ ನನ್ನನ್ನು ಗುರುತಿಸಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ನಾನು ಕಾಯ ವಾಚಾ ಮನಸಾ ಪಕ್ಷ ಕಟ್ಟಲು ದುಡಿಯುವುದಾಗಿ ತಿಳಿಸಿದರು.
ಆದೇಶ ಪತ್ರ ನೀಡಿದ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ರಾಮಯ್ಯನವರು ಪಕ್ಷ ಸಂಘಟನೆಗೆ ಶ್ರಮಿಸಿ ಪಕ್ಷವನ್ನು ರಾಜ್ಯದ ಎಲ್ಲಾ ಭಾಗಗಳಲ್ಲೂ ಕಟ್ಟಲಿ, ಬಾಬಾ ಸಾಹೇಬ್ ಅಂಬೇಡ್ಕರ್ ಕನಸು ನನಸು ಮಾಡಲಿ ಎಂದು ಹಾರೈಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz