ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಯಾವುದೇ ದಾಖಲೆ ಇಲ್ಲದೆ 1.70 ಕೋಟಿ ರೂ. ಹಣವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದೆ. ಹುಬ್ಬಳ್ಳಿ ಮೂಲದ ವ್ಯಾಪಾರಿ ವಿಕ್ರಮ್ ಸಿಂಗ್ ಎಂಬುವವರಿಗೆ ಸೇರಿದ 1ಕೋಟಿ 70 ಲಕ್ಷ ರೂ ಹಣ ವಶಕ್ಕೆ ಪಡೆದಿರುವ ನರಗುಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ(ಮೇ 21) ಮಧ್ಯರಾತ್ರಿ ಕಾರಿನಲ್ಲಿ ಹಣ ಸಾಗಾಟದ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಾರು ತಪಾಸಣೆ ಮಾಡಿದಾಗ ಈ ಹಣ ಪತ್ತೆಯಾಗಿದೆ. ಕಾರು ಚಾಲಕ ಶಿವಬಸಯ್ಯ ಹಾಗೂ ವ್ಯಾಪಾರಿ ವಿಕ್ರಮ್ ಸಿಂಗ್ ಅವರನ್ನು ಇನ್ಸ್‌ಪೆಕ್ಟರ್ ಮಲ್ಲಯ್ಯ ಮಠಪತಿ ಅವರು ಹಣದ ಮೂಲ ಹಾಗೂ ದಾಖಲೆಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


