ದೆಹಲಿ: ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ವಿಮೆ ಹಾಗೂ ಆಟೋ ಚಾಲಕರ ಹೆಣ್ಣುಮಕ್ಕಳ ವಿವಾಹಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡುವುದಾಗಿ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ನಗರದ ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ವಿಮೆ ಹಾಗೂ ಆಟೋ ಚಾಲಕರ ಹೆಣ್ಣುಮಕ್ಕಳ ವಿವಾಹಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡುವುದಾಗಿ ಅವರು ಘೋಷಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಆಮ್ ಆದ್ಮಿ ಪಕ್ಷದ ವರಿಷ್ಠ ಕೇಜ್ರಿವಾಲ್ ಆಟೋ ಚಾಲಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೊಂಡ್ಲಿ ಕ್ಷೇತ್ರದಲ್ಲಿ ಆಟೋ ಚಾಲಕನೋರ್ವನ ಕುಟುಂಬ ಸದಸ್ಯರೊಟ್ಟಿಗೆ ಊಟ ಮಾಡಿರುವ ಕೇಜ್ರಿವಾಲ್, ಆಟೋ ಚಾಲಕ ಸಮುದಾಯಕ್ಕೆ ನೆರವಾಗುವ ಹಲವು ಘೋಷಣೆಗಳನ್ನು ಮಾಡಿದರು.
ಆಟೋ ಚಾಲಕರಿಗೆ ವರ್ಷಕ್ಕೆ 2 ಬಾರಿ 2,500 ರೂಪಾಯಿಗಳ ಸಮವಸ್ತ್ರ ಭತ್ಯೆ, ಚಾಲಕರ ಮಕ್ಕಳಿಗೆ ಉಚಿತ ಕೋಚಿಂಗ್ ಹಾಗೂ ಪೂಚೋ ಆಪ್ ಗೆ ಮತ್ತೆ ಚಾಲನೆ ನೀಡುವ ಭರವಸೆಗಳನ್ನೂ ಕೇಜ್ರಿವಾಲ್ ಆಟೋ ಡ್ರೈವರ್ಸ್ ಸೆ ಚರ್ಚಾ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx