ಪಾವಗಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಹೇಶ್ ಅವರು, ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಆರ್.ಡಿ.ರೋಪ್ಪ ಗ್ರಾಮಕ್ಕೆ ಭೇಟಿ ನೀಡಿದರು.
ಇದೇ ವೇಳೆ ಶ್ರೀ ಚಿಕ್ಕ ಪಾಲವಾಯಪ್ಪ ಸ್ವಾಮಿ ಮತ್ತು ಎಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಮಂಜೂರು ಮಾಡಲಾದ 2 ಲಕ್ಷ ರೂಪಾಯಿಗಳ ಡಿಡಿಯನ್ನು ಕಮಿಟಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರಿನ ಗಣ್ಯರ ಸಮ್ಮುಖದಲ್ಲಿ ವಿತರಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕೂಡ ಸೇರಿದೆ. ಪಾವಗಡ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು 1.47 ಕೋಟಿ ಅನುದಾನ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಇದಲ್ಲದೆ ವಿದ್ಯಾರ್ಥಿಗಳಿಗೆ ಶಿಷ್ಯವೇತನ(ಸುಜ್ಞಾನ ನಿಧಿ), ನಿರ್ಗತಿಗಳಿಗೆ ಮಾಶಾಸನ, ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ವದಗನೆ, ಕುಡಿಯ ನೀರಿನ ಸಮಸ್ಯೆ ನಿವಾರಿಸಲು ಶುದ್ಧ ನೀರಿನ ಘಟಕ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾಗಿದೆ ಎಂದು ತಿಳಿಸಿದ ಅವರು, ಯೋಜನೆಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೈಜೋಡಿಸುವಂತೆ ಅವರು ಮನವಿ ಮಾಡಿಕೊಂಡರು.
ಈ ಕಾರ್ಯಕ್ರಮದಲ್ಲಿ ದೇವಸ್ಥಾನ ಅಧ್ಯಕ್ಷರು, ಪದಾಧಿಕಾರಿಗಳು, ವೈ.ಎನ್.ಹೊಸಕೋಟೆ ಮೇಲ್ವಿಚಾರಕರಾದಂತ ಮಹಮ್ಮದ್ ಸೇವಾ ಪ್ರತಿನಿಧಿ ರಾಧಮ್ಮ ಮತ್ತು ಊರಿನ ಗಣ್ಯರು/ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296