ನವದೆಹಲಿ: ಬೆಂಗಳೂರಿನ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ Xನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ತಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬಾಬುಸಾಪಾಳ್ಯದಲ್ಲಿ ಕುಸಿದು ಬಿದ್ದ ನಿರ್ಮಾಣದ ಹಂತದ ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಬಿಹಾರ ಮೂಲದ ಅರ್ಮಾನ್, ಮೊಹಮದ್ ಸಾಹಿಲ್, ಸೋಲೋ ಪಾಸ್ವಾನ್, ಶ್ರೀರಾನ್ ಕಿರುಪಾಲ್. ತಮಿಳುನಾಡು ಮೂಲದ ಮಣಿಕಂಠನ್, ಸತ್ಯರಾಜು ಮತ್ತು ಆಂಧ್ರಪ್ರದೇಶ ಮೂಲದ ತುಳುಸಿರೆಡ್ಡಿ ಮತ್ತು ಉತ್ತರ ಪ್ರದೇಶ ಮೂಲದ ಪುಲ್ಚನ್ ಯಾದವ್ ಮೃತರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296