ತಿರುಪತಿ: ತಿರುಪತಿಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಯಲ್ಲಿ ಒಟ್ಟು 40 ಮಂದಿ ಭಕ್ತರು ಗಾಯಗೊಂಡಿದ್ದು, ಗಂಭೀರವಾಗಿರುವವರನ್ನು ಹೆಲಿಕಾಫ್ಟರ್ ಮೂಲಕ ಹೈದ್ರಾಬಾದ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. . ಗಾಯಾಳುಗಳಿಗೆ ಉಚಿತವಾಗಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಸಾವನ್ನಪ್ಪಿದ 7 ಮಂದಿಯಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಿರ್ಮಲಾ (50) ಸೇರಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಟಿಟಿಡಿ ನಿರಾಕರಿಸಿದೆ. ಮೃತರು ವಿಶಾಖಪಟ್ಟಣದ ರಜನಿ(47), ಲಾವಣ್ಯ(40), ಶಾಂತಿ, ತಮಿಳುನಾಡಿನ ಸೇಲಂನ ಮಲ್ಲಿಕಾ (49), ನರಸೀಪಟ್ಟಣದ ನಾಯ್ಡುಬಾಬು (59) ಎಂದು ಗುರುತಿಸಲಾಗಿದೆ.
ಈ ನಡುವೆ ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx