ಶಿವಮೊಗ್ಗ: ಏಷ್ಯನ್ ಡೆವಲಪ್ಟೆಂಟ್ ಬ್ಯಾಂಕ್, ರಾಜ್ಯದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲು 2500 ಕೋಟಿ ರೂ. ನೆರವು ನೀಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೊರಬದ ವಿದ್ಯುತ್ ನಗರದಲ್ಲಿ ಭಾನುವಾರ 25 ಕೋಟಿ ವೆಚ್ಚದಲ್ಲಿ ಸೊರಬ –ಕುಮಟಾ– ಕಟಮಡಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಅರ್ಹತೆವುಳ್ಳ ಬಿಪಿಎಲ್ ಕಾರ್ಡ್ ದಾರರಿಗೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ತಡೆ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ.
ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಗೆ ತೆರಳಿ ಸಮಸ್ಯೆ ನಿವಾರಿಸಲಾಗುವುದು. ಪ್ರತಿ ಗ್ರಾಮಗಳಿಗೆ 92 ಯೋಜನೆಗಳಡಿ 250 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ರಾಜ್ಯದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲು ಏಷ್ಯನ್ ಡೆವಲಪ್ಟೆಂಟ್ ಬ್ಯಾಂಕ್ 2500 ಕೋಟಿ ರೂ ನೆರವು ನೀಡಿದ್ದು, ಇದನ್ನು ಬಳಸಿಕೊಂಡು ಎಲ್ಲಾ ಸೌಕರ್ಯಗಳು ಇರುವ ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296