ಬೆಳಗಾವಿ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲ್ಲೂಕಿನಲ್ಲಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ನಲ್ಲಿ ಹೇಳಿದರು.
ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ರಮೇಶ್ ಬಾಬು ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳು ಯಾವುವು ಹಾಗೂ ಎಷ್ಟು ಯೋಜನೆಗಳು ಪ್ರಗತಿಯಲ್ಲಿವೆ ಎನ್ನುವ ಪ್ರಶ್ನೆಗೆ ಉತ್ತರಿಸಿದರು.
ಚಿಕ್ಕನಾಯಕನಹಳ್ಳಿಯವರು ಇಷ್ಟೊಂದು ಬುದ್ದಿವಂತರು ಎಂದು ನಾನು ತಿಳಿದುಕೊಂಡಿರಲಿಲ್ಲ. ಆದರೂ ಈಗ ಸ್ಪೆಷಲ್ ಪ್ಯಾಕೇಜ್ ನೀಡಿ ಎಂದು ಹೇಳುತ್ತಿದ್ದಾರೆ. ಯಾರ ಕಾಲದಲ್ಲಿ ಇದೆಲ್ಲವೂ ಆಯಿತು ಎಂದು ನಾನು ಚರ್ಚಿಸಲು ಹೋಗುವುದಿಲ್ಲ. ಪಕ್ಷ, ವ್ಯಕ್ತಿ ಎಲ್ಲವನ್ನು ಬಿಟ್ಟು ಕೆಲಸವನ್ನು ಮಾಡಿಸಿ ಕೊಂಡಿದ್ದಾರೆ ಎಂದರು.
ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5,300 ಕೋಟಿ ರೂ. ಹಣ ನೀಡಿದರೆ, ಸಾಕಷ್ಟು ಕೆಲಸಗಳನ್ನು ಮುಗಿಸಬಹುದು. ನಾನು ಪದೇ, ಪದೇ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದರೆ ವಿಪಕ್ಷಗಳಿಗೆ ಬೇಸರವಾಗಬಹುದು. ಅವರು ಕೊಡದೇ ಇದ್ದರು, ಈ ಭಾಗದ ಕೆಲಸಗಳನ್ನು ಪೂರ್ಣಗೊಳಿಸಬೇಕಿದೆ. ಇನ್ನು ಈ ಭಾಗದಲ್ಲಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಸಿಗಬೇಕಿದೆ. ಅನುಮತಿ ಸಿಕ್ಕರೆ ಹೆಚ್ಚಿನ ಕೆಲಸ ಮುಗಿದಂತೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


