nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿವೃಷ್ಟಿಯಿಂದಾದ ಹಾನಿಗೆ 297 ಕೋಟಿ ರೂ. ಪರಿಹಾರ: ಕೃಷ್ಣ ಭೈರೇಗೌಡ
    ರಾಜ್ಯ ಸುದ್ದಿ December 13, 2024

    ಅತಿವೃಷ್ಟಿಯಿಂದಾದ ಹಾನಿಗೆ 297 ಕೋಟಿ ರೂ. ಪರಿಹಾರ: ಕೃಷ್ಣ ಭೈರೇಗೌಡ

    By adminDecember 13, 2024No Comments4 Mins Read
    krishne byre gowda (1)

    ಬೆಳಗಾವಿ ಸುವರ್ಣ ವಿಧಾನಸೌಧ: ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆ, ಜೀವಹಾನಿ, ಮನೆ ಹಾನಿ ಸೇರಿದಂತೆ ವಿವಿಧ ಹಾನಿಗೆ ಸಂಬಂಧಿಸಿದಂತೆ ಒಟ್ಟು 297 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

    ಬೆಳಗಾವಿ ಸುವರ್ಣ ಸೌಧದಲ್ಲಿ ಜರುಗುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ವಿಧಾನಸಭೆಯಲ್ಲಿ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ ಮಳೆಹಾನಿ ಹಾಗೂ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸದನಕ್ಕೆ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.

    ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ. ಕಳೆದ 20 ವರ್ಷಗಳಲ್ಲಿ ಸುಮಾರು 10 ರಿಂದ 15 ವರ್ಷ ಒಂದಲ್ಲ ಒಂದು ರೀತಿಯ ಪ್ರಕೃತಿ ವಿಕೋಪವನ್ನು ರಾಜ್ಯ ಎದುರಿಸಿದೆ. 2000 ರಿಂದ ಈವರೆಗೆ ಸುಮಾರು 17 ವರ್ಷ ಬರ ಪರಿಸ್ಥಿತಿಯನ್ನು ಎದುರಿಸಿದ್ದರೆ, 2019, 2022 ಹಾಗೂ 2024 ರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ರಾಜ್ಯದಲ್ಲಿ ಆಗಿದೆ.

    ರಾಜ್ಯದಲ್ಲಿ ಕೇವಲ ಮಳೆಯಿಂದ ಮಾತ್ರವಲ್ಲ, ಆಲಿಕಲ್ಲು ಮಳೆ, ಸಿಡಿಲು, ಮನೆ ಕುಸಿತ ಸಂದರ್ಭದಲ್ಲಿಯೂ ಹಾನಿ ಉಂಟಾಗಿದೆ, ಇದರ ಜೊತೆಗೆ 2018, 2019 ಮತ್ತು 2024 ರಲ್ಲಿ ಭೂ ಕುಸಿತ ಕೂಡ ಸಂಭವಿಸಿ ಹಾನಿಯಾಗಿದೆ. ಹೀಗಾಗಿ ಸರ್ಕಾರ ಇದನ್ನು ತಡೆಗಟ್ಟಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ತೀವ್ರ ಬರ ಪರಿಸ್ಥಿತಿ ಬಂದರೂ, ಎನ್ಡಿಆರ್ಎಫ್ ನಿಂದ ನಿಗದಿತ ಪ್ರಮಾಣದಲ್ಲಿ ಕೇಂದ್ರದಿಂದ ಪರಿಹಾರ ಹಣ ಬಾರದೇ ಇದ್ದಾಗ ನ್ಯಾಯಾಲಯದ ಮೊರೆ ಹೋಗಿ ಪರಿಹಾರ ಹಣ ಕೂಡ ಪಡೆದು, ಸುಮಾರು 45 ಲಕ್ಷ ರೈತರಿಗೆ 4200 ಕೋಟಿ ರೂ. ಪರಿಹಾರ ಕೊಟಿದ್ದೇವೆ ಎಂದರು.

    ರೈತರಿಗೆ ಬೆಳೆ ನಷ್ಟ ಪರಿಹಾರ ಪಾವತಿ :

    ಈ ವರ್ಷ 852 ಮಿ.ಮೀ. ಮುಂಗಾರು ವಾಡಿಕೆ ಮಳೆ ಬದಲಿಗೆ 978 ಮಿ.ಮೀ. ಅಂದರೆ ಶೇ. 20 ರಷ್ಟು ಹೆಚ್ಚು ಮಳೆಯಾಗಿದೆ. ಹೀಗಾರಿನಲ್ಲಿ ಕೂಡ 173 ಮಿ.ಮೀ. ವಾಡಿಕೆ ಮಳೆ ಬದಲಿಗೆ 213 ಮಿ.ಮೀ. ಅಂದರೆ ಶೇ. 23 ರಷ್ಟು ಹೆಚ್ಚು ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಆಗಿದೆ. ಪ್ರಸಕ್ತ ಮುಂಗಾರು ಅವಧಿಯಲ್ಲಿ 1,59,718 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಒಟ್ಟು ರೂ.94.94 ಕೋಟಿ ಪರಿಹಾರ ವಿತರಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿ 1,45,254 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ರೂ.01.12 ಕೋಟಿ ಹಣವನ್ನು ರೈತರಿಗೆ ಪರಿಹಾರವಾಗಿ ಮಂಜೂರು ಮಾಡಲಾಗಿದೆ. ಕೆಲವು ಭಾಗದಲ್ಲಿ ರೈತರಿಗೆ ಪರಿಹಾರ ಹಣ ಖಾತೆಗೆ ಜಮಾ ಆಗಿದೆ. ಮುಂದಿನ ಒಂದೆರಡು ವಾರದಲ್ಲಿ ಎಲ್ಲಾ ರೈತರ ಖಾತೆಗಳಿಗೂ ಪರಿಹಾರ ಹಣ ಸಂದಾಯವಾಗಲಿದೆ” ಎಂದರು.

    133 ಮೃತ ಕುಟುಂಬಕ್ಕೆ 6.64 ಕೋಟಿ ರೂ. ಪರಿಹಾರ:

    ನಮ್ಮ ರಾಜ್ಯದಲ್ಲಿ 10 ಹವಾಮಾನ ವಲಯಗಳಿವೆ (ಆಗ್ರೋ ಕ್ಲೈಮ್ಯಾಟಿಕ್ ಝೋನ್). ಇಲ್ಲಿ 450 ಮಿ.ಮೀ ರಿಂದ 4,000 ಮಿ.ಮೀ ವರೆಗೆ ವಾಡಿಕೆ ಮಳೆಯಾಗುವ ವೈವಿಧ್ಯತೆಯ ಪ್ರದೇಶಗಳು ಕರ್ನಾಟಕದಲ್ಲಿದೆ. ದೇಶದ ಯಾವ ರಾಜ್ಯದಲ್ಲೂ ಈ ವೈವಿಧ್ಯತೆ ಇಲ್ಲ. ಇದರಿಂದ ರಾಜ್ಯದಲ್ಲಿ ಕೆಲ ಪ್ರಾಣಹಾನಿಯೂ ಸಂಭವಿಸಿದೆ. ಕೆಲವರು ಹೊಳೆ ಉಕ್ಕಿಹರಿಯುವ ಸಂದರ್ಭದಲ್ಲಿ ನೀರಿನಲ್ಲಿ ಇಳಿದು ಕೊಚ್ಚಿಹೋಗಿದ್ದಾರೆ. ಕೆರೆ ತುಂಬಿದೆ ಎಂದು ಗೊತ್ತಿದ್ದರೂ ಈಜಲು ಹೋಗಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಸಿಡಿಲು ಬಡಿತದಿಂದ ಮೃತಪಟ್ಟವರೂ ಸೇರಿ ಈ ವರ್ಷ ಒಟ್ಟಾರೆ 133 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರದ ಕಡೆಯಿಂದ ಇಂತಹ ಘಟನೆಗಳಿಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಅಲ್ಲದೆ, ಈ ಎಲ್ಲಾ 133 ಮೃತರ ಕುಟುಂಬಗಳಿಗೆ ಈಗಾಗಲೇ ತಲಾ 5 ಲಕ್ಷ ದಂತೆ 6.64 ಕೋಟಿ ರೂ. ಪಾವತಿಸಲಾಗಿದೆ ಎಂದರು.

    ಎಲ್ಲೆಲ್ಲಿ ಮಳೆಹಾನಿ..?:

    ಈ ವರ್ಷ ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾದ ಕಾರಣ ಕೃಷ್ಣಾ ನದಿ ಉಕ್ಕಿ ಹರಿದು ನದಿಪಾತ್ರದ ಜನರಿಗೆ ಹಾನಿಯಾಗಿತ್ತು. ತುಂಗಭದ್, ಭೀಮಾ, ಕಬಿನಿ ಕಾವೇರಿಯಲ್ಲೂ ಹೆಚ್ಚು ನೀರು ಬಂದು ಹಾನಿಯಾಗಿತ್ತು. ಧಾರವಾಡದ ಬೆಣ್ಣೆಹಳ್ಳ ಬಾಗಲಕೋಟೆ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಭಾಗದಲ್ಲೂ ಮಳೆಯಿಂದಾಗಿ ನದಿಗಳು ಉಕ್ಕಿಹರಿದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ರಸ್ತೆ, ಸೇತುವೆ, ಶಾಲಾ ಕೊಠಡಿ, ಅಂಗನವಾಡಿ, ಆರೋಗ್ಯ ಕೇಂದ್ರ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಕೆಲ ವಿದ್ಯುತ್ ಸಂಪರ್ಕ ಕಟ್ಟಡಗಳಿಗೆ ಹಾನಿ ಉಂಟಾಗಿದೆ. ರಿಪೇರಿ ಕೆಲಸಗಳಿಗೆ ರೂ.80.47 ಕೋಟಿ ಅನುಧಾನ ನೀಡಲಾಗಿದೆ. ಈ ಪೈಕಿ ರೂ. 60.16 ಕೋಟಿ ಹಣ ಈಗಾಗಲೇ ಬಿಡುಗಡೆ ಮಾಡಿದ್ದು, ಪ್ರಸ್ತುತ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರ ಖಾತೆಯಲ್ಲಿ ಮುಂದಿನ ತುರ್ತು ಪರಿಹಾರಕ್ಕಾಗಿ ಸುಮಾರು ರೂ 579 ಕೋಟಿ ಅನುದಾನ ಲಭ್ಯವಿದೆ ಎಂದರು.

    ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ಯೋಜನೆ:

    ಈ ವರ್ಷ ಭೂ ಕುಸಿತ ಪ್ರಕರಣ ನಿರೀಕ್ಷೆಗಿಂತ ಹೆಚ್ಚಾಗಿದೆ. ಕಾರವಾರದ ಘಟನೆ ಆಘಾತಕಾರಿಯಾಗಿದೆ. ಮಲೆನಾಡು ಭಾಗದಲ್ಲೂ ಸಣ್ಣಪುಟ್ಟ ಭೂ ಕುಸಿತದ ಘಟನೆ ಸಂಭವಿಸಿದೆ. ಈ ನಿಟ್ಟಿನಲ್ಲಿ ಭೂ ಕುಸಿತವನ್ನು ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಸದನಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. “ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚಿಸಿ ಅವರ ಸೂಚನೆ ಹಿನ್ನೆಲೆ ಎರಡೂವರೆ ವರ್ಷದ ಅವಧಿಗೆ ರೂ.400 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೇವೆ. ಭೂ ಕುಸಿತಕ್ಕೆ ಒಳಗಾಗಬಹುದಾದ ಪ್ರದೇಶಗಳ ಬಗ್ಗೆ ನ್ಯಾಷನಲ್ ಜಿಯೋಲಾಜಿಕಲ್ ಸರ್ವೇ ಎಂಬ ಕೇಂದ್ರ ಸರ್ಕಾರದ ಸಂಸ್ಥೆಯಿಂದ ವರದಿ ತರಿಸಲಾಗಿದೆ. ಆ ವರದಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ 06 ಜಿಲ್ಲೆಗಳ 863 ಗ್ರಾಮ ಪಂಚಾಯಿತಿಗಳನ್ನು ಭೂ ಕುಸಿತ ಉಂಟಾಗಬಹುದಾದ ಪ್ರದೇಶಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯುವ ಸಂಬಂಧಿ ಯೋಜನೆಗಳ ಕುರಿತು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಲಾಗಿದೆ. ರೂ. 425 ಕೋಟಿ ವೆಚ್ಚದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಭೂ ಕುಸಿತ ತಡೆಗಟ್ಟುವ ಕಾಮಗಾರಿಗೆ ಹಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಅದರ ಭಾಗವಾಗಿ ತಕ್ಷಣ ರೂ.152 ಕೋಟಿ ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ. ಇದಲ್ಲದೆ, ಮಳೆ ಹೆಚ್ಚಾದಾಗ ನಗರ ಪ್ರದೇಶಗಳಲ್ಲಿ ನೀರನ್ನು ಹೊರಹಾಕುವ ಮೂಲಭೂತ ವ್ಯವಸ್ಥೆ ಇಲ್ಲ. ಇದೂ ಸಹ ಪ್ರವಾಹಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ರೂ. 184 ಕೋಟಿ ಮೌಲ್ಯದ 259 ಕಾಮಗಾರಿಗಳಿಗೆ ತಕ್ಷಣ ಅನುಮೋದನೆ ನೀಡಲಿದ್ದೇವೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.