ಬೀದರ್ : ಎಟಿಎಂ ಯಂತ್ರಕ್ಕೆ ಹಣ ತುಂಬಲು ತರುತ್ತಿದ್ದ ವೇಳೆ ಹಾಡಹಗಲೇ ಏಜೆನ್ಸಿಯ ಸಿಬ್ಬಂದಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿ , ದರೋಡೆ ಮಾಡಿದ ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನವನ್ನು ಪೊಲೀಸ್ ಇಲಾಖೆ ಘೋಷಿಸಿದೆ.
ದರೋಡೆಕೋರರ ಮಾಹಿತಿ ಸಿಕ್ಕಿದಲ್ಲಿ, ಬೀದರ್ ಜಿಲ್ಲೆಯ ಎಸ್ಪಿ ಪ್ರದೀಪ್ ಗುಂಟಿ ಮೊಬೈಲ್ ನಂಬರ್: 9480803401 ಹಾಗೂ ಬೀದರ್ ಜಿಲ್ಲೆಯ ಡಿಎಸ್ಪಿ ಮೊಬೈಲ್ ನಂಬರ್ 9480803420 ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.
ಜನವರಿ 16ರಂದು ಬೀದರ್ ನಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿತ್ತು. ಜಿಲ್ಲಾ ನ್ಯಾಯಾಲಯದ ಸನಿಹದಲ್ಲಿನ ಎಟಿಎಂನಲ್ಲಿ ಹಣ ಹಾಕಲು ಬಂದಿದ್ದ ಸಿಎಂಸಿಎಸ್ ಏಜೆನ್ಸಿ ಸಿಬ್ಬಂದಿಗಳ ಮೇಲೆ ಬೈಕ್ ನಲ್ಲಿ ಬಂದಿದ್ದ ದರೋಡೆಕೋರರ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ದರೋಡೆಕೋರರ ಗುಂಡಿಗೆ ಏಜೆನ್ಸಿಯ ಗಿರಿ ವೆಂಕಟೇಶ್ ಎಂಬವರು ಬಲಿಯಾಗಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4