ಮೈಸೂರು: ಸಾಹಿತಿ ದೇವನೂರು ಮಹಾದೇವ ಅವರ ಆರೆಸ್ಸೆಸ್ ಆಳ ಮತ್ತು ಅಗಲ ಎನ್ನುವ ಕಿರು ಹೊತ್ತಿಗೆಗೆ ರಾಜ್ಯಾದ್ಯಂತ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಬಿಡುಗಡೆಯಾಗಿ ನಾಲ್ಕೇ ದಿನದಲ್ಲಿ ದಾಖಲೆಯ ಪುಸ್ತಕ ಮಾರಾಟವಾಗಿದೆ.
ನಾಲ್ಕು ದಿನಗಳಲ್ಲಿ 9 ಸಾವಿರಕ್ಕೂ ಅಧಿಕ ಪುಸ್ತಕಗಳು ಮಾರಾಟವಾಗಿದ್ದು, ಇನ್ನೂ ಕೂಡ ರಾಜ್ಯದಲ್ಲಿ ಪುಸ್ತಕಕ್ಕೆ ಭಾರೀ ಬೇಡಿಕೆ ಕೇಳಿ ಬಂದಿದೆ.
ದೇವನೂರು ಮಹಾದೇವ ತಮ್ಮ ಪಠ್ಯ ಕೈ ಬಿಡುವಂತೆ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು. ಅಲ್ಲದೇ ಪಠ್ಯ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸಾಮಾಜಿಕ ಜಾಲತಾಣಗಳನ್ನು ಬಳಸಿ ಜನರನ್ನು ಜಾಗೃತಗೊಳಿಸುತ್ತೇನೆ ಎಂದು ಸಿಎಂಗೆ ಬರೆದ ಪತ್ರದಲ್ಲಿಯೂ ತಿಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೇವನೂರರ ಪುಸ್ತಕ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿರುವುದೇ ಅಲ್ಲದೇ, ಪುಸ್ತಕದ ಪಿಡಿಎಫ್ ಪ್ರತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


