ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ನಿಷೇಧಿಸುವ ಕುರಿತಾದ ಚರ್ಚೆಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆದಿದ್ದಾರೆ. “ಆರ್ಎಸ್ಎಸ್ ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಮಾಡೋದಕ್ಕೂ ಆಗಲ್ಲ” ಎಂದು ಅವರು ಬೆಂಗಳೂರಿನಲ್ಲಿಂದು ಸ್ಪಷ್ಟಪಡಿಸಿದರು.
ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಂಘಟನೆಯ ನಿಷೇಧದ ಬಗ್ಗೆ ಸರ್ಕಾರ ಎಲ್ಲೂ ಪ್ರಸ್ತಾಪಿಸಿಲ್ಲ ಎಂದು ತಿಳಿಸಿದರು.
ನಿಷೇಧದ ಪ್ರಸ್ತಾಪವಿಲ್ಲ: ನಮ್ಮ ಸರ್ಕಾರವಾಗಲಿ ಅಥವಾ ಮತ್ಯಾವುದೇ ಸರ್ಕಾರವಾಗಲಿ RSS ಅನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಈ ಕುರಿತ ಅನಗತ್ಯ ಚರ್ಚೆಗಳಿಗೆ ಅರ್ಥವಿಲ್ಲ ಎಂದು ಸಚಿವರು ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ ಸಂಘಟನೆಯ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ಮಾತನಾಡಿದ್ದನ್ನು ಉಲ್ಲೇಖಿಸಿದ ಜಾರಕಿಹೊಳಿ, “ಒಂದು ಸಂಘಟನೆಯನ್ನು ಸಂಪೂರ್ಣವಾಗಿ ನಿಷೇಧಿಸುವುದಕ್ಕೂ ಮತ್ತು ಅದರ ನಿರ್ದಿಷ್ಟ ಚಟುವಟಿಕೆಗಳನ್ನು ನಿರ್ಬಂಧಿಸುವುದಕ್ಕೂ ದೊಡ್ಡ ವ್ಯತ್ಯಾಸವಿದೆ” ಎಂದು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


