ಚಾಮರಾಜನಗರ : ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತದ ವಿರುದ್ಧ ನಮ್ಮ ಭಾರತ್ ಜೋಡೋ ಯಾತ್ರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಸಮಾವೇಶದಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ , ಯಾರಿಂದಲೂ, ಯಾತ್ರೆಯನ್ನು ನಿಲ್ಲಿಸಲು ಆಗುವುದಿಲ್ಲ. ಭಾರತ್ ಜೋಡೋ ಉದ್ದೇಶ ಭಾಷಣ ಮಾಡುವುದಕ್ಕೆ ಅಲ್ಲ.
ಬಿಜೆಪಿಯವರು ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಜೊತೆ ಇಡೀ ದೇಶದ ಜನರು ಇದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ ನಿರುದ್ಯೋಗ ಇದೆ ಎಂದು ರಾಹುಲ್ ಗಾಂಧಿ ಹೇಳಿದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಾವು ಪಾದಯಾತ್ರೆ ಮಾಡುತ್ತೇವೆ, ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತದ ವಿರುದ್ಧ ನಮ್ಮ ಪ್ರತಿಭಟನೆ ನಡೆಯುತ್ತದೆ, ಈ ಪಾದಯಾತ್ರೆಯಲ್ಲಿ ಯಾವುದೇ ದ್ವೇಷ, ಹಿಂಸೆ ಇಲ್ಲ, ಎಲ್ಲಾ ಧರ್ಮದ ಜನರು ಇದರಲ್ಲಿ ಭಾಗಿಯಾಗಿದ್ದಾರೆ. ಯಾರಿಂದ ಕೂಡ ಈ ಜೋಡೋ ಯಾತ್ರೆ ನಿಲ್ಲಿಸಲು ಆಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy