ನವದೆಹಲಿ: RSS ಭಾರತದ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಶಿಕ್ಷಣ ನೀತಿಯನ್ನು ವಿರೋಧಿಸಿ ಇಂಡಿಯಾ ಬಣದ ವಿದ್ಯಾರ್ಥಿ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಆರ್ಎಸ್ಎಸ್ ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನಿಯಂತ್ರಿಸುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸಂಪನ್ಮೂಲಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮತ್ತು ದೇಶದ ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ ಎಸ್ ಗೆ ಹಸ್ತಾಂತರಿಸುತ್ತಿದೆ ಎಂದು ಆರೋಪಿಸಿದರು.
ಆರ್ ಎಸ್ ಎಸ್ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ನಾಶಮಾಡಲು ಹೊರಟಿದ್ದು, ಇಂಡಿಯಾ ಮೈತ್ರಿಕೂಟ ಇದಕ್ಕೆ ಅವಕಾಶ ನೀಡುವುದಿಲ್ಲ.. ಎಂದು ರಾಹುಲ್ ಗಾಂಧಿ ಗುಡುಗಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4