ತುಮಕೂರು: ಆರ್.ಎಸ್.ಎಸ್ ಸಿದ್ದಾಂತ, ದೇಶ ಭಕ್ತಿ ಜೊತೆಗೆ ನಾನಿದ್ದೀನಿ ಅಂತ ಈ ಹಿಂದೆಯೂ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಬಗ್ಗೆ ನಾನು ಏನು ಮಾತಾಡಲ್ಲ. ನಾವು ದೊಡ್ಡ ದೇಶ ಭಕ್ತಿಯ ಸಂಸ್ಥೆಯೊಂದಿಗೆ ಜೋಡಿಸಿಕೊಂಡಿದ್ದೇವೆ. ಸಿದ್ದರಾಮಯ್ಯ ಎಂಥಾ ಸಂಸ್ಥೆ ಜೊತೆ ಜೋಡಿಸಿಕೊಂಡಿದ್ದಾರೆ ಅಂತಾ ಗೊತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದರು.
ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆರ್.ಎಸ್.ಎಸ್ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.
40% ಕಮೀಷನ್ ಆರೋಪ ಮಾಡಿದ್ದ ಕೆಂಪಣ್ಣನ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಯಾವುದೇ ರೀತಿಯ ಹಿಂದೇಟು ಹಾಕುತಿಲ್ಲ. ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದ ಅವರು, ಅರ್ಕಾವತಿ ಫೈಲ್ ರೀ ಓಪನ್ ಆಗೋದಕ್ಕೆ ನಿನ್ನೆ ಸಭೆಯಲ್ಲಿ ಚರ್ಚೆ ಆಗಿಲ್ಲ, ಆದರೇ 40% ಸುಳ್ಳು ಆರೋಪ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಅನ್ನೋ ಬಗ್ಗೆ ಚರ್ಚೆ ನಡೆದಿದೆ, ಈ ಸಂಬಂಧ ಮುನಿರತ್ನ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿಸಿದ್ರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz